ದುಬೈ, ಯೂರೋಪ್‌ಗೆ ತೆರಳಲು ಅನುಮತಿ ಕೊಡಿ – ಕೋರ್ಟ್​ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್!

ಬೆಂಗಳೂರು : ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಅವರು ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ಗೆ ತೆರಳಲು ಅನುಮತಿ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1ರಿಂದ 25ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.

ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್‌ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್‌ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ. ದರ್ಶನ್‌ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ಕೋರ್ಟ್‌ನಲ್ಲಿ ನಡೆಯಲಿದೆ.

ಜಾಮೀನು ನೀಡುವಾಗ ಬೆಂಗಳೂರು ಬಿಡುವಂತಿಲ್ಲ ಎಂಬ ಷರತ್ತನ್ನು ನಟನಿಗೆ ಹೈಕೋರ್ಟ್ ವಿಧಿಸಿತ್ತು. ನಂತರ ಬೆಂಗಳೂರು ಬಿಡುವಂತಿಲ್ಲ ಎಂಬ ಷರತ್ತು ಸಡಿಲಿಸಿ ದೇಶಾದ್ಯಂತ ಪ್ರಯಾಣಕ್ಕೆ ಅನುಮತಿ ನೀಡಿತ್ತು. ಇದೀಗ ಅದೇ ಚಿತ್ರೀಕರಣ ಕಾರಣ ನೀಡಿ ವಿದೇಶಕ್ಕೆ ತೆರಳಲು ಅನುಮತಿಗಾಗಿ ದರ್ಶನ್​ ಅರ್ಜಿ ಸಲ್ಲಿಸಿದ್ದಾರೆ. ಎ2 ಆರೋಪಿ ದರ್ಶನ್ ಪರವಾಗಿ ವಕೀಲ ಸುನಿಲ್ ಕುಮಾರ್ ಅರ್ಜಿ ಸಲ್ಲಿಕೆ ಮಾಡಿದ್ದು, ವಿದೇಶಗಳಲ್ಲಿ ಶೂಟಿಂಗ್ ಮಾಡುವ ಅಗತ್ಯವಿದೆ ಎಂದು ಪ್ರೋಡ್ಯೂಸರ್​ರಿಂದ ಮನವಿ ಮಾಡಿಸಿದ್ದಾರೆ.

ಇದನ್ನೂ ಓದಿ : ಸಿದ್ದು ಪೂರ್ಣಚಂದ್ರ ನಿರ್ದೇಶನದ ‘ಪುಟ್ಟಣ್ಣನ ಕತ್ತೆ’ ಚಿತ್ರದ ಫಸ್ಟ್ ಲುಕ್ ಫೋಸ್ಟರ್ ರಿಲೀಸ್​​!

Btv Kannada
Author: Btv Kannada

Read More