ಮೈಸೂರು : ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಘಟನೆ ನಡೆದಿದೆ.
ಹಾಸನದ ಲಕ್ಷ್ಮಿಪುರಂ ಬಡಾವಣೆಯ ಖಲಿಂ ರೆಹಮಾನ್, ಶೇಖ್ ಅಬ್ದುಲ್ ಖಾದರ್ ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಶೇಖ್ ಮುನಿರ್ ಅಹ್ಮದ್ ಗಂಭೀರವಾಗಿ ಗಾಯಗೊಂಡಿದ್ದು, ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಸನದಿಂದ ಚುಂಚನಕಟ್ಟೆ ಕಡೆ ಹೋಗುವಾಗ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಸಾಲಿಗ್ರಾಮ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಪ್ರೀತಿಸಿ ಮದುವೆಯಾಗಿದ್ದ ಪತ್ನಿಯನ್ನು 10 ಬಾರಿ ಇರಿದು ಕೊಂದ ಪತಿ!

Author: Btv Kannada
Post Views: 232