ಕನ್ನಡ ತಮಿಳಿನಿಂದ ಹುಟ್ಟಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಕಮಲ್ ಹಾಸನ್ ವಿರುದ್ಧ ಆಕ್ರೋಶ ಹೆಚ್ಚಾದ ಬೆನ್ನಲ್ಲೇ ನಟ ಮತ್ತೆ ಮೊಂಡಾಟವಾಡಿದ್ದಾರೆ. ನಾನು ಹೇಳಿದ್ದು ನನ್ನ ಪ್ರಕಾರ ಸರಿ, ನಾನು ಕ್ಷಮೆ ಕೇಳಲ್ಲ ಎಂದು ಉದ್ಧಟತನ ಮೆರೆದಿದ್ದಾರೆ.
ರಾಜಕಾರಣಿಗಳಿಗೆ ಭಾಷಾ ವಿಷಯಗಳ ಬಗ್ಗೆ ಮಾತನಾಡಲು ಅರ್ಹತೆ ಇಲ್ಲ, ಮತ್ತು ತಾನು ಕೂಡ ಈ ವಿಷಯದಲ್ಲಿ ರಾಜಕೀಯವಾಗಿ ಮಾತನಾಡಿಲ್ಲ. ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ. ನಾನು ಪ್ರೀತಿಯಿಂದ ಮಾತನಾಡಿದ್ದೇನೆ, ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ. ನಾನು ಕ್ಷಮೆಯಾಚಿಸುವುದಿಲ್ಲ, ಇತಿಹಾಸಕಾರರಿಂದ ತಿಳಿದಂತೆ ಮಾತನಾಡಿದ್ದೇನೆ ಎಂದು ಕಮಲ್ ಹಾಸನ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಕಮಲ್ ಹಾಸನ್‌ರ ಹೇಳಿಕೆಯಿಂದ ಕನ್ನಡಿಗರ ಭಾವನೆಗಳಿಗೆ ಧಕ್ಕೆಯಾಗಿದೆ. ಕನ್ನಡ ಭಾಷೆಯ ಇತಿಹಾಸ ಮತ್ತು ಸಾಂಸ್ಕೃತಿಕ ಮಹತ್ವವನ್ನು ಕಡೆಗಣಿಸುವಂತಹ ಈ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಶಿವರಾಜ್ ಕುಮಾರ್ ಅವರ ಸಮ್ಮುಖದಲ್ಲಿ ಈ ರೀತಿಯ ಹೇಳಿಕೆ ನೀಡಿರುವುದು ಕನ್ನಡ ಚಿತ್ರರಂಗದ ಅಭಿಮಾನಿಗಳಿಗೆ ಇನ್ನಷ್ಟು ಕೋಪ ತರಿಸಿದೆ. ಕೆಲವರು ಕಮಲ್ ಹಾಸನ್‌ರ ಚಿತ್ರಗಳ ಬಹಿಷ್ಕಾರಕ್ಕೆ ಕರೆ ನೀಡಿದ್ದಾರೆ.
ಇದನ್ನೂ ಓದಿ : ಯುವರಾಜ್ ಕುಮಾರ್ ನಟನೆಯ ʼಎಕ್ಕʼ ಚಿತ್ರ ಜು.18ಕ್ಕೆ ರಿಲೀಸ್!
