“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹುನಿರೀಕ್ಷಿತ “X&Y” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲ್ಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ.
ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. “X&Y”, ಡಿ.ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ಈ ಮೊದಲು “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ಅವರು ನಿರ್ದೇಶಿಸಿದ್ದು, ಮೂರು ಚಿತ್ರಗಳು ಭಿನ್ನ ಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ. ಬಿಡುಗಡೆಯ ಹಂತದಲ್ಲಿರುವ ಸತ್ಯಪ್ರಕಾಶ್ ನಿರ್ದೇಶನದ “X&Y” ಚಿತ್ರ ಕೂಡ ಭರ್ಜರಿ ಯಶಸ್ಸು ಕಾಣಲಿ ಹಾಗೂ ಪ್ರಶಸ್ತಿಗಳು ಲಭಿಸಲಿ ಅನ್ನೋದು ಚಿತ್ರತಂಡದ ಹಾರೈಕೆ.
ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ “X&Y” ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ : ಕಾಂಗ್ರೆಸ್ ಕಾರ್ಯಕರ್ತರ ಜೊತೆ ಇಂಧನ ಸಚಿವ ಕೆಜೆ ಜಾರ್ಜ್ ಸಭೆ – ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚನೆ!
