ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ.. ನಿಂತಿದ್ದ ಲಾರಿಗೆ ಕ್ವಾಲೀಸ್ ವಾಹನ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ದುರ್ಮರಣ!

ಹುಬ್ಬಳ್ಳಿ : ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದ ಕ್ವಾಲಿಸ್ ವಾಹನವೊಂದು ಡಿಕ್ಕಿ ಹೊಡೆದ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಬಳಿ ನಡೆದಿದ್ದು, ಅಪಘಾತದ ಭೀಕರತೆಗೆ ಕಾರಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕ್ವಾಲಿಸ್ ವಾಹನ ವೇಗವಾಗಿ ಬಂದು ಲಾರಿಗೆ ಡಿಕ್ಕಿ ಹೊಡೆದಿದ್ದು, ಲಾರಿಗೆ ಗುದ್ದಿದ ಕ್ವಾಲಿಸ್ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಪರಿಣಾಮ ಕಾರಿನ ಮುಂಭಾಗದಲ್ಲಿ ಕುಳಿತಿದ್ದ ಮೂವರು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ. ಮೃತರ ಮಾಹಿತಿ ತಿಳಿದು ಬಂದಿಲ್ಲ. ಸ್ಥಳಕ್ಕೆ ಅಣ್ಣಿಗೇರಿ ಠಾಣೆಯ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕನ್ನಡದ ಖ್ಯಾತ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ವಿಧಿವಶ

Btv Kannada
Author: Btv Kannada

Read More