ದೊಡ್ಡಬಳ್ಳಾಪುರ : ಅವೈಜ್ಞಾನಿಕ ಹೆದ್ದಾರಿ ವಿರುದ್ದ ಯಲಹಂಕ ದೊಡ್ಡಬಳ್ಳಾಪುರ ಹೆದ್ದಾರಿಯ ಟೋಲ್ ಪ್ಲಾಜಾ ಬಳಿ ಬೃಹತ್ ಪ್ರತಿಭಟನೆ ನಡೆದಿದೆ. ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ಸಮರ್ಪಕ ರಸ್ತೆ ಮಾಡದ್ದರಿಂದ ರೈತರು, ವಾಹನ ಸವಾರರಿಗೆ ಭಾರೀ ತೊಂದರೆಯಾಗ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದೊಡ್ಡಬಳ್ಳಾಪುರದಿಂದ ಹಿಂದೂಪುರಕ್ಕೆ ಹಾದು ಹೋಗಿರುವ ರಾಜ್ಯ ಹೆದ್ದಾರಿಯಲ್ಲಿ ಮೂಲ ಸೌಕರ್ಯ ನೀಡುವವರೆಗೂ ಟೋಲ್ ವಸೂಲಿ ನಿಲ್ಲಿಸುವಂತೆ ಆಗ್ರಹಿಸಿದ್ದಾರೆ. ಯಲಹಂಕ ಶಾಸಕ ಎಸ್.ಆರ್ ವಿಶ್ವನಾಥ್ಗೆ ಸ್ಥಳೀಯ ಮುಖಂಡರು, ಸಾರ್ವಜನಿಕರು ಸಾಥ್ ನೀಡಿದ್ದಾರೆ.
ಹಲವು ಭಾರಿ ಮನವಿಗಳನ್ನು ನೀಡಿದ್ರು ರಸ್ತೆ ಸರಿಪಡಿಸಿ ಮೂಲ ಸೌಕರ್ಯ ಕಲ್ಪಿಸಿಲ್ಲ ಅಂತ ಜನರು ಆಕ್ರೋಶ ಹೊರಹಾಕಿದ್ದಾರೆ. ಇನ್ನುಈ ಅವೈಜ್ಞಾನಿಕ ಹೆದ್ದಾರಿಯಿಂದ ಸಾಕಷ್ಟು ಜನ ಜೀವ ಮತ್ತು ಕೈ ಕಾಲು ಕಳೆದುಕೊಂಡಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ. ಕೂಡಲೇ ಟೋಲ್ ಆಡಳಿತ ಮಂಡಳಿ ಎಚ್ಚೆತ್ತು ಸಮಸ್ಯೆ ಸರಿಪಡಿಸುವಂತೆ ಆಗ್ರಹಿಸಿದ್ದು, ಟೋಲ್ ಪ್ಲಾಜಾ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಇದನ್ನೂ ಓದಿ : ಮಂಗಳೂರಲ್ಲಿ ಭಾರೀ ಮಳೆಗೆ ಮನೆಗಳ ಮೇಲೆ ಗುಡ್ಡ ಕುಸಿತ – ಓರ್ವ ಬಾಲಕಿ ಸಾವು.. ಮುಂದುವರೆದ ರಕ್ಷಣಾ ಕಾರ್ಯಾಚರಣೆ!
