ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪುಣ್ಯಸ್ನಾನ!

ಪ್ರಯಾಗ್​ರಾಜ್ ​: 144 ವರ್ಷಗಳ ನಂತರ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು(ಫೆ.10) ಭಾಗವಹಿಸಿ, ಪುಣ್ಯಸ್ನಾನ ಮಾಡಿದ್ದಾರೆ. 

ಪ್ರಯಾಗ್‌ರಾಜ್‌ಗೆ ಒಂದು ದಿನದ ಪ್ರವಾಸ ಕೈಗೊಂಡಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿದ್ದಾರೆ. ಹಾಗೆಯೇ ಅಕ್ಷಯವಟ ಹಾಗೂ ಹನುಮಾನ್ ಮಂದಿರದಲ್ಲಿಯೂ ಪೂಜೆ ಸಲ್ಲಿಸಲಿದ್ದಾರೆ. ಜತೆಗೆ ಡಿಜಿಟಲ್ ಕುಂಭ ಅನುಭವ್ ಕೇಂದ್ರಕ್ಕೂ ಭೇಟಿ ನೀಡಲಿದ್ದಾರೆ.

ಈಗಾಗಲೇ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ, ಭೂತಾನ್​ ದೇಶದ ರಾಜ ಜಿಗ್ಮೆ ಕೇಸರ್ ನಾಮ್ಗ್ಯೆಲ್ ವಾಂಗ್ಚುಕ್, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಸೇರಿದಂತೆ ಹಲವಾರು ಗಣ್ಯರು, ರಾಜಕಾರಣಿಗಳು, ಸಾಧು–ಸಂತರು ಎಂಬಂತೆ ಕೋಟ್ಯಾಂತರ ಜನರು ಭಾಗವಹಿಸಿ ಪುಣ್ಯ ಸ್ನಾನ ಮಾಡಿದ್ದಾರೆ.

Btv Kannada
Author: Btv Kannada

Read More