ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ಗೆ ಗುಡ್ನ್ಯೂಸ್ ಸಿಕ್ಕಿದೆ. ಭಾರತ ಬಿಟ್ಟು ವಿದೇಶಕ್ಕೆ ತೆರಳಲು ಕೋರ್ಟ್ ಗ್ರೀನ್ ಸಿಗ್ನಲ್ ಕೊಟ್ಟಿದೆ. ಸದ್ಯ ಷರತ್ತುಬದ್ಧ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿರುವ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ವಿದೇಶಕ್ಕೆ ತೆರಳಲು ಬೆಂಗಳೂರಿನ 64ನೇ CCH ಕೋರ್ಟ್ ಅನುಮತಿ ನೀಡಿದೆ.
ಡೆವಿಲ್ ಸಿನಿಮಾದ ಚಿತ್ರೀಕರಣಕ್ಕಾಗಿ 25 ದಿನಗಳ ಕಾಲ ದುಬೈ ಮತ್ತು ಯೂರೋಪ್‌ಗೆ ತೆರಳಲು ಅವಕಾಶ ಕೋರಿ ನಟ ದರ್ಶನ್ ನ್ಯಾಯಾಲಯದ ಅನುಮತಿ ಕೇಳಿದ್ದರು. ಜೂನ್ 1 ರಿಂದ 25ರ ವರೆಗೆ ವಿದೇಶಕ್ಕೆ ತೆರಳಲು ಅವಕಾಶ ನೀಡುವಂತೆ ಸಿಆರ್‌ಪಿಸಿ ಸೆಕ್ಷನ್ 439(1) (b) ಅಡಿ ದರ್ಶನ್ ಅರ್ಜಿ ಸಲ್ಲಿಸಿದ್ದರು. ಇದೀಗ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು 64ನೇ CCH ಕೋರ್ಟ್ ಪುರಸ್ಕರಿಸಿದ್ದು, ಫಾರಿನ್ಗೆ ಹೋಗಲು ನ್ಯಾಯಮೂರ್ತಿ ಐ.ಪಿ ನಾಯ್ಕ್ ಆದೇಶ ಹೊರಡಿಸಿದ್ದಾರೆ.
ದರ್ಶನ್ಗೆ ಜಾಮೀನು ನೀಡುವಾಗ ಬೆಂಗಳೂರು ಬಿಟ್ಟು ಹೊರ ಹೋಗುವಂತಿಲ್ಲ ಎಂದು ಹೈಕೋರ್ಟ್ ಷರತ್ತು ವಿಧಿಸಿತ್ತು. ನಂತರ ಸಿನಿಮಾ ಚಿತ್ರೀಕರಣ ಕಾರಣ ನೀಡಿ ಹೊರರಾಜ್ಯಗಳಿಗೆ ಹೋಗಲು ಷರತ್ತು ಸಡಿಲಿಸಿಕೊಂಡಿದ್ದರು. ಇದೀಗ ವಿದೇಶಗಳಲ್ಲಿ ಸಿನಿಮಾ ಚಿತ್ರೀಕರಣ ಮಾಡಬೇಕಿರೋ ಕಾರಣ ಫಾರಿನ್ಗೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ಈ ಮೂಲಕ ಡೆವಿಲ್ ಸಿನಿಮಾ ತಂಡಕ್ಕೂ ಬಿಗ್ ರಿಲೀಫ್ ಸಿಕ್ಕಿದೆ.
ಇದನ್ನೂ ಓದಿ : ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಜೂ.27ಕ್ಕೆ ರಿಲೀಸ್!
