ಪಂಜಾಬ್ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ 2025ರ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ಮುಖಾಮುಖಿಯಾಗಿದ್ದವು. ಈ ಪಂದ್ಯವನ್ನು ಐದು ಬಾರಿಯ ಚಾಂಪಿಯನ್ಸ್ ಮುಂಬೈ 21 ರನ್ಗಳಿಂದ ಗೆದ್ದುಕೊಳ್ಳುವ ಮೂಲಕ ಕ್ವಾಲಿಫೈಯರ್ 2 ಕ್ಕೆ ಅರ್ಹತೆ ಪಡೆದುಕೊಂಡಿದೆ. ಇದೀಗ ಭಾನುವಾರ ನಡೆಯಲಿರುವ ಕ್ವಾಲಿಫೈಯರ್ 2 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್, ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ.
ನಿನ್ನೆಯ ಎಲಿಮಿನೇಟರ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ 229 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್ಗೆ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 208 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಈ ಮೂಲಕ ಸೋಲೊಪ್ಪಿಕೊಂಡ ಗಿಲ್ ಪಡೆ IPL ಟೂರ್ನಿಯಿಂದ ಹೊರಬಿದ್ದಿದೆ.
ಪಂಜಾಬ್ vs ಮುಂಬೈ ನಾಳೆ ಕ್ವಾಲಿಫೈಯರ್ 2 : ಭಾನುವಾರ ಅಹಮದಾಬಾದ್‌ನಲ್ಲಿ ಕ್ವಾಲಿಫೈಯರ್ -2 ಪಂದ್ಯ ನಡೆಯಲಿದೆ. ಕ್ವಾಲಿಫೈಯರ್ -1ರಲ್ಲಿ ಸೋತ ಪಂಜಾಬ್ ಕಿಂಗ್ಸ್ ಹಾಗೂ ಎಲಿಮಿನೇಟರ್‌ನಲ್ಲಿ ಗೆದ್ದ ಮುಂಬೈ ತಂಡಗಳು ಸೆಣಸಾಡಲಿವೆ. ಅದರಲ್ಲಿ ಗೆದ್ದ ತಂಡ ಜೂ.3ರಂದು ಅಹಮದಾಬಾದ್‌ನಲ್ಲಿ ಆರ್‌ಸಿಬಿ ವಿರುದ್ಧ ಫೈನಲ್‌ನಲ್ಲಿ ಆಡಲಿದೆ. ಆರ್‌ಸಿಬಿ ತಂಡವು ಚೊಚ್ಚಲ ಐಪಿಎಲ್ ಟ್ರೋಫಿಯ ಕನವರಿಕೆಯಲ್ಲಿದೆ. ಇದೀಗ ಎರಡನೇ ಕ್ವಾಲಿಫೈಯರ್ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಇದನ್ನೂ ಓದಿ : ಅನುಮತಿ ಇಲ್ಲದೆ CDR ಪಡೆಯುವ ಕ್ರಮ : ಪೊಲೀಸ್ ರಾಜ್ಯವಾದೀತು – ಹೈಕೋರ್ಟ್ ಎಚ್ಚರಿಕೆ!
