ಬೆಂಗಳೂರು : ಕಲ್ಯಾಣ ಕರ್ನಾಟಕ ಸಾರಿಗೆ (KKRTC) ಬಸ್ಸಿಗೆ ಕಾರು ಡಿಕ್ಕಿಯಾದ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನೆಲಮಂಗಲ ತಾಲೂಕಿನ ತೊಣಚಿನಕುಪ್ಪೆ ಪ್ರವಾಸಿ ಡಾಬಾದ ಬಳಿ ನಡೆದಿದೆ.
ವೇಗವಾಗಿ ಬಂದ ಕಾರು ಹಿಂಬದಿಯಿಂದ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಕಾರು ಗುದ್ದಿದ ರಭಸಕ್ಕೆ ಕಾರಿನಲ್ಲಿದ್ದ ಓಬಳಾರೆಡ್ಡಿ (35) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಸುನಿಲ್ ಮತ್ತು ದಿವ್ಯ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರು ಭೇಟಿ ನಿಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಜುಲೈನಿಂದ ಹಳದಿ ಮಾರ್ಗ ಸಂಚಾರಕ್ಕೆ ಮುಕ್ತ!

Author: Btv Kannada
Post Views: 239