ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾಗೆ ಎಡಿಜಿಪಿಯಾಗಿ ಬಡ್ತಿ – ರಾಜ್ಯ ಸರ್ಕಾರ ಆದೇಶ!

ಬೆಂಗಳೂರು : ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಪಿಎಸ್ ಮಹಿಳಾ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ಮುಂಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕದ 2000ನೇ ಬ್ಯಾಚ್​ನ ಐಪಿಎಸ್ ಅಧಿಕಾರಿಯಾಗಿರುವ ರೂಪಾ ಅವರನ್ನು ಐಜಿಪಿಯಿಂದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿಯಾಗಿ (ಎಡಿಜಿಪಿ) ಸರ್ಕಾರವು ಮುಂಬಡ್ತಿ ನೀಡಿದೆ. ಮುಂದಿನ ಆದೇಶದವರೆಗೂ ಸದ್ಯ ಕಾರ್ಯನಿರ್ವಹಿಸುತ್ತಿರುವ ಹುದ್ದೆಯಲ್ಲಿ ಮುಂದುವರಿಯುವಂತೆ ಸೂಚಿಸಿದೆ.

ಮುಂಬಡ್ತಿ ಸಂಬಂಧ ಕಳೆದ ತಿಂಗಳು ನ್ಯಾಯಾಲಯದ ಮೆಟ್ಟಿಲೇರಿದ್ದ ಡಿ.ರೂಪಾ ಅವರು, ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ಮುಂಬಡ್ತಿ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸುವಂತೆ ರೂಪಾ ಅವರಿಗೆ ಸೂಚಿಸಿತ್ತು. ಇನ್ನೆರಡು ತಿಂಗಳಲ್ಲಿ ಕಾನೂನಿನ ಅನ್ವಯ ಪರಿಗಣಿಸಬೇಕೆಂದು ಏ.25ರಂದು ಸರ್ಕಾರಕ್ಕೆ ನಿರ್ದೇಶಿಸಿತ್ತು.

ಇದನ್ನೂ ಓದಿ : KMF ವತಿಯಿಂದ ‘ವಿಶ್ವ ಹಾಲು ದಿನಾಚರಣೆ’ ಸಂಭ್ರಮ – ನಾಳೆ ನೂತನ ಉತ್ಪನ್ನಗಳ ಬಿಡುಗಡೆ.. ನಂದಿನಿ ಪನೀರ್ ಖಾದ್ಯ ಸ್ಪರ್ಧೆ!

Btv Kannada
Author: Btv Kannada

Read More