ಕಸಾಪ ಅಧ್ಯಕ್ಷ ಮಹೇಶ್ ಜೋಶಿಗೆ ನೀಡಿದ್ದ ಸಚಿವ ಸ್ಥಾನಮಾನ ಹಿಂಪಡೆದ ರಾಜ್ಯ ಸರ್ಕಾರ!

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ಸವಲತ್ತುಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸರ್ಕಾರ ಹಿಂಪಡೆದಿದೆ.

ಕಸಾಪ ಅಧ್ಯಕ್ಷ ಮಹೇಶ್ ಜೋಶಿ ಕಾರ್ಯವೈಖರಿಯನ್ನು ಆಕ್ಷೇಪಿಸಿ ಕೆಲ ಸಾಹಿತಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಲಿಖಿತ ದೂರು ನೀಡಿದ್ದರು. ಮಹೇಶ್ ಜೋಶಿಗೆ ನೀಡಲಾಗಿರುವ ಸಚಿವ ದರ್ಜೆ ಸ್ಥಾನಮಾನ ಹಿಂಪಡೆಯಬೇಕು. ಅಲ್ಲದೆ, ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನದಿಂದ ಇಳಿಸಬೇಕು ಎಂದು ಮನವಿ ಮಾಡಿದ್ದರು.

ಈ ಮಧ್ಯೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರಕಾರದ ಅಧೀನ ಕಾರ್ಯದರ್ಶಿ ಬಾಣದರಂಗಯ್ಯ ಎನ್.ಆರ್. ಆದೇಶ ಹೊರಡಿಸಿದ್ದು, 2023ರ ಜನವರಿ 5ರಂದು ಮಹೇಶ್ ಜೋಶಿಗೆ ನೀಡಲಾಗಿದ್ದ ರಾಜ್ಯ ಸಚಿವ ಸ್ಥಾನಮಾನ ಹಾಗೂ ರಾಜ್ಯ ಸಚಿವರ ದರ್ಜೆಗೆ ಅನ್ವಯಿಸುವ ಎಲ್ಲ ಸೌಲಭ್ಯಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಶ್ರೀರಾಮಚಂದ್ರಾಪುರ ಮಠದಿಂದ ಆರು ಗಣ್ಯರಿಗೆ ಪ್ರಶಸ್ತಿ ಪ್ರದಾನ!

Btv Kannada
Author: Btv Kannada

Read More