ಆರೋಪಿಯ ಫೋನ್‌ಪೇ ಬಳಸಿ ಬೆಟ್ಟಿಂಗ್‌ ಆಡಿದ ಆರೋಪ – ತುರುವೇಕೆರೆ ಸಬ್ ಇನ್ಸ್‌ಪೆಕ್ಟ‌ರ್ ಸಂಗಪ್ಪ ಮೇಟಿ ಸಸ್ಪೆಂಡ್!

ತುಮಕೂರು : ತುರುವೇಕೆರೆ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಂಗಪ್ಪ ಮೇಟಿ ಅವರನ್ನು ಕರ್ತವ್ಯ ಲೋಪದ ಆರೋಪದ ಮೇಲೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ (ಎಸ್‌ಪಿ) ಅಶೋಕ್ ಕೆ.ವಿ. ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಕೇಸ್‌ ಒಂದರಲ್ಲಿ ಬಂಧಿತನಾಗಿದ್ದ ಆರೋಪಿಯ ಮೊಬೈಲ್‌ ವಶಕ್ಕೆ ಪಡೆದುಕೊಂಡಿದ್ದ ಸಬ್ ಇನ್ಸ್‌ಪೆಕ್ಟರ್ ಸಂಗಪ್ಪ ಮೇಟಿ, ಅದರಲ್ಲಿನ ಪೋನ್‌ಪೇ ಪಾಸ್‌ವರ್ಡ್ ಪಡೆದು ಅದರ ಮೂಲಕ ಬೆಟ್ಟಿಂಗ್ ಆಡಿ ಆರೋಪಿಯ ಫೋನ್‌ಪೇ ಮೂಲಕ ಆತನ ಬ್ಯಾಂಕ್ ಖಾತೆಯಲ್ಲಿದ್ದ ಸುಮಾರು 95,000 ರೂ. ಹಣವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಸಂಗಪ್ಪ ಮೇಟಿ ಆರೋಪಿಯನ್ನು ಜೈಲಿಗೆ ಕಳುಹಿಸಿದ ಬಳಿಕ ಮೊಬೈಲ್‌ನಿಂದ ಹಣವನ್ನು ತೆಗೆದುಕೊಂಡು ಬೆಟ್ಟಿಂಗ್‌ನಲ್ಲಿ ಭಾಗಿಯಾದ ಘಟನೆ ಬೆಳಕಿಗೆ ಬಂದಿದೆ.

ಈ ಎಲ್ಲಾ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ, ಎಸ್‌ಪಿ ಅಶೋಕ್ ಕೆ.ವಿ. ಅವರು ತುರುವೇಕೆರೆ SI ಸಂಗಪ್ಪ ಮೇಟಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಈ ಘಟನೆಯು ತುಮಕೂರು ಜಿಲ್ಲೆಯಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದ್ದು, ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಇದನ್ನೂ ಓದಿ : ಹೈವೇಯಲ್ಲಿ ಕೆಲಸ ಮಾಡ್ತಿದ್ದವರ ಮೇಲೆ ಹರಿದ ಟ್ಯಾಂಕರ್ – ಮೂವರು ಸ್ಥಳದಲ್ಲೇ ಸಾವು!

Btv Kannada
Author: Btv Kannada

Read More