ಬೆಂಗಳೂರು : ‘ತಮಿಳು ಭಾಷೆಯಿಂದ ಕನ್ನಡ ಭಾಷೆಯ ಉಗಮವಾಯಿತು’ ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಎಲ್ಲೆಡೆಯೂ ಅಸಮಾಧಾನದ ಕಿಡಿ ಹೊತ್ತಿದ್ದು, ಕೂಡಲೇ ಕಮಲ್ ಹಾಸನ್ ಕ್ಷಮೆ ಕೇಳಬೇಕೆಂದು ಕನ್ನಡಿಗರು ಆಗ್ರಹಿಸಿದ್ದಾರೆ. ಇನ್ನು ಕರ್ನಾಟಕದಲ್ಲಿ ತಮ್ಮ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಭಾರೀ ವಿರೋಧ ವ್ಯಕ್ತವಾದ ಹಿನ್ನಲೆ ನಟ ಕಮಲ್ ಹಾಸನ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಕಮಲ್ ಹಾಸನ್ ಅವರ ‘ಥಗ್ ಲೈಫ್’ ಸಿನಿಮಾ ಜೂನ್ 5ಕ್ಕೆ ಬಿಡುಗಡೆ ಆಗಲಿದ್ದು, ಈ ಚಿತ್ರ ಪ್ರದರ್ಶನವನ್ನು ತಡೆಯದಂತೆ ಸರ್ಕಾರ, ಪೊಲೀಸ್ ಇಲಾಖೆ ಹಾಗೂ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಿರ್ಬಂಧಿಸಬೇಕು, ಸಿನಿಮಾ ಪ್ರದರ್ಶನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಸೂಚಿಸಿ ಕಮಲ್ ಹಾಸನ್ ಅರ್ಜಿ ಸಲ್ಲಿಸಿದ್ದಾರೆ.
ರಾಜ್ಯ ಪೊಲೀಸ್ ಮಹಾನಿರ್ದೇಶಕರು, ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಅರ್ಜಿ ಸಲ್ಲಿಸಿ ನಟ ಕಮಲ್ ಹಾಸನ್ ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ತಮ್ಮ ಒಡೆತನದ ರಾಜಕಮಲ್ ಫಿಲ್ಮ್ ಇಂಟರ್ನ್ಯಾಷನಲ್ ಸಂಸ್ಥೆಯ ಸಿಇಒ ಮೂಲಕ ಕಮಲ್ ಹಾಸನ್ ಈ ಅರ್ಜಿಯನ್ನು ಸಲ್ಲಿಸಿದ್ದಾರೆ. ಈಗಾಗಲೇ ಅರ್ಜಿ ಸಲ್ಲಿಕೆಯಾಗಿದ್ದು ಇನ್ನು ವಿಚಾರಣೆಗೆ ಹಾಜರಾಗಬೇಕಿದೆ.
ಇದನ್ನೂ ಓದಿ : ಆಧಾರವಿಲ್ಲದೇ ಬೆಂಕಿ ಹಚ್ಚುವ ಮಾತುಗಳನ್ನಾಡಬಾರದು – ಕಮಲ್ ಹಾಸನ್ ವಿರುದ್ಧ ಪ್ರಹ್ಲಾದ್ ಜೋಶಿ ಆಕ್ರೋಶ!
