ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕರಾಗಿ ನಟಿಸುತ್ತಿರುವ ಬಹುನಿರೀಕ್ಷಿತ “ದಿ ಡೆವಿಲ್” ಚಿತ್ರದ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರ ಶ್ರೀ ಜೈ ಮಾತ ಕಂಬೈನ್ಸ್ ಲಾಂಛನದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದ್ದು, ಪ್ರಕಾಶ್ ವೀರ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿದ್ದಾರೆ. ಬೆಂಗಳೂರು, ರಾಜಸ್ಥಾನ ಮುಂತಾದ ಕಡೆ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಡಬ್ಬಿಂಗ್ ಆರಂಭವಾಗಲಿದೆ.
ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್ಗಳ ಮೂಲಕ ಎಲ್ಲರ ಗಮನ ಸೆಳೆದಿರುವ “ಡೆವಿಲ್” ಚಿತ್ರದ ಮತ್ತೊಂದು ವಿಭಿನ್ನ ಪೋಸ್ಟರ್ ಸಹ ಇತ್ತೀಚೆಗೆ ಬಿಡುಗಡೆಯಾಗಿದೆ. ದರ್ಶನ್ ಅವರ ಲುಕ್ಗೆ ಅಭಿಮಾನಿಗಳು ಫಿದಾ ಆಗಿದ್ದು, ಚಿತ್ರ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ.
ಸುಧಾಕರ್ ಎಸ್.ರಾಜ್ ಅವರ ಛಾಯಾಗ್ರಹಣವಿರುವ “ದಿ ಡೆವಿಲ್” ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ರಾಮ್ ಲಕ್ಷ್ಮಣ್ ಅವರ ಸಾಹಸ ನಿರ್ದೇಶನವಿದೆ. ದರ್ಶನ್ ಅವರಿಗೆ ನಾಯಕಿಯಾಗಿ ರಚನ ರೈ ಅಭಿನಯಿಸುತ್ತಿದ್ದಾರೆ. ತುಳಸಿ, ಅಚ್ಯುತಕುಮಾರ್, ಮಹೇಶ್ ಮಂಜ್ರೇಕರ್, ಶ್ರೀನಿವಾಸಪ್ರಭು, ಶೋಭ್ ರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ : ಮೀನು ಹಿಡಿಯಲು ಹೋದ ಯುವಕ ನೀರುಪಾಲು!
