ಗುಜರಾತ್ ಅಹ್ಮದಾಬಾದ್ನ ಶ್ರೀ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಪಿಎಲ್-2025 ಫೈನಲ್ ಮ್ಯಾಚ್ ಆರಂಭವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಮುಖಾಮುಖಿ ಆಗಿವೆ. ಟಾಸ್ ಪ್ರಕ್ರಿಯೆಯಲ್ಲಿ ಪಂಜಾಬ್ ಕಿಂಗ್ಸ್ ಗೆದ್ದಿದೆ.
ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ಚೇಸಿಂಗ್ ಆಯ್ಕೆ ಮಾಡಿಕೊಂಡಿದ್ದು, ಆರ್‌ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಇನ್ನುಳಿದಂತೆ ಆರ್‌ಸಿಬಿ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. 18ನೇ ಆವೃತ್ತಿಯ ಫೈನಲ್ ಪಂದ್ಯ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದೆ.
ಆರ್‌ಸಿಬಿ ತಂಡ : ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ಮಯಾಂಕ್ ಅಗರ್ವಾಲ್, ಲಿಯಾಮ್ ಲಿವಿಂಗ್‌ಸ್ಟೋನ್, ಜಿತೇಶ್ ಶರ್ಮಾ, ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಜೋಶ್ ಹೇಜಲ್‌ವುಡ್ ಮತ್ತು ಯಶ್ ದಯಾಳ್.
ಪಂಜಾಬ್ ತಂಡ : ಶ್ರೇಯಸ್ ಅಯ್ಯರ್ (ನಾಯಕ), ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್, ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೋನಿಸ್, ವಿಜಯ್‌ಕುಮಾರ್ ವೈಶಾಕ್, ಅಜ್ಮತುಲ್ಲಾ ಒಮರ್ಜಾಯ್, ಕೈಲ್ ಜೇಮಿಸನ್, ಅರ್ಷ್‌ದೀಪ್ ಸಿಂಗ್ ಮತ್ತು ಯುಜ್ವೇಂದ್ರ ಚಾಹಲ್.
ಇದನ್ನೂ ಓದಿ : ಸಚಿವ ಈಶ್ವರ್ ಖಂಡ್ರೆ ಭೇಟಿ ಮಾಡಿದ ಅನಿಲ್ ಕುಂಬ್ಲೆ – ಅರಣ್ಯ ಇಲಾಖೆ ರಾಯಭಾರಿ ನೇಮಕಕ್ಕೆ ಧನ್ಯವಾದ ತಿಳಿಸಿದ ಮಾಜಿ ಕ್ರಿಕೆಟಿಗ!

Author: Btv Kannada
Post Views: 403