RCB ವಿಜಯೋತ್ಸವ – ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

ಬೆಂಗಳೂರು : ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ಕಪ್ ಗೆದ್ದ ಆರ್‌ಸಿಬಿ ತಂಡ ಅಭಿಮಾನಿಗಳೊಂದಿಗೆ ವಿಜಯೋತ್ಸವ ಆಚರಿಸಲು ತವರಿಗೆ ಬಂದಿಳಿದಿದೆ. ಆರ್​ಸಿಬಿ ಆಟಗಾರರಿಗೆ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ ಸಲ್ಲಿಸಲಿದ್ದಾರೆ. ನಂತರ ಸಂಜೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಆಟಗಾರರಿಗೆ ಸನ್ಮಾನ ಸಮಾರಂಭ ನಡೆಯಲಿದೆ. ಹೀಗಾಗಿ, ಮಧ್ಯಾಹ್ನ 3 ಗಂಟೆ ನಂತರ ರಾತ್ರಿ 8ರ ವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಬೆಂಗಳೂರು ಸಂಚಾರ ಪೊಲೀಸರು ಸಲಹೆ ನೀಡಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್​​ಸಿಬಿ ತಂಡಕ್ಕೆ ಸಂಜೆ 5 ರಿಂದ 6 ರವರೆಗೆ ಸನ್ಮಾನ ಸಮಾರಂಭ ಇರುವುದರಿಂದ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ವಿಧಾನಸೌಧ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತಲಿನ ರಸ್ತೆಗಳನ್ನು ಬಳಸದಂತೆ ಸಲಹೆ ನೀಡಲಾಗಿದೆ. ವಿಜಯೋತ್ಸವ ಮೆರವಣಿಗೆ ಇರುವುದಿಲ್ಲ. ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೋ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ’’ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ಎಕ್ಸ್​ ಸಂದೇಶದಲ್ಲಿ ತಿಳಿಸಿದ್ದಾರೆ.

ಆರ್​ಸಿಬಿ ಆಟಗಾರರನ್ನು ತೆರೆದ ವಾಹನದಲ್ಲಿ ಮೆರವಣಿಗೆ ನಡೆಸುವ ಮೂಲಕ ಚಿನ್ನಸ್ವಾಮಿ ಸ್ಟೇಡಿಯಂಗೆ ಕರೆದೊಯ್ಯಲು ಈ ಹಿಂದೆ ಚಿಂತನೆ ನಡೆಸಲಾಗಿತ್ತು. ಆದರೆ, ಭದ್ರತೆಯ ದೃಷ್ಟಿಯಿಂದ ಅದಕ್ಕೆ ಅವಕಾಶ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಈಗಾಗಲೇ ತಿಳಿಸಿದ್ದಾರೆ.

ಇದನ್ನೂ ಓದಿ : ಸಿಎಂ ಆಗಿ ಸಿದ್ದರಾಮಯ್ಯ 5 ವರ್ಷವೂ ಇರಬಹುದು, 10ವರ್ಷವೂ ಇರಬಹುದು – ಕೆ.ಜೆ ಜಾರ್ಜ್‌!

Btv Kannada
Author: Btv Kannada

Read More