ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಓರ್ವ RCB ಅಭಿಮಾನಿ ಬಲಿ, ಇಬ್ಬರ ಸ್ಥಿತಿ ಗಂಭೀರ!

ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಆರ್​ಸಿಬಿ ವಿಜಯೋತ್ಸವ ನಡೆಯಲಿದ್ದು, ಈಗಾಗಲೇ ಆರ್​ಸಿಬಿ ತಂಡದ ಆಟಗಾರರು ಬೆಂಗಳೂರಿಗೆ ಆಗಮಿಸಿದ್ದಾರೆ. ಅವರನ್ನು ಕಣ್ತುಂಬಿಕೊಳ್ಳಲು ಚಿನ್ನಸ್ವಾಮಿ ಸ್ಟೇಡಿಯಂನತ್ತ ಜನಸಾಗರವೇ ಹರಿದುಬಂದಿದೆ. ಚಿನ್ನಸ್ವಾಮಿ ಸ್ಟೇಡಿಯಂ ಒಳಗೆ ನುಗ್ಗಲು ಜನರು ತಳ್ಳಾಟ ನಡೆಸಿದ್ದು, ಕಾಲ್ತುಳಿತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾನೆ.

ಇನ್ನಿಬ್ಬರು ಅಭಿಮಾನಿಗಳ ಸ್ಥಿತಿ ಗಂಭೀರವಾಗಿದ್ದು, 20ಕ್ಕೂ ಹೆಚ್ಚು ಜನರು ಅಸ್ವಸ್ಥ, 500 ಹೆಚ್ಚು ಮಂದಿಗೆ ಗಾಯಗಳಾಗಿದೆ. ಜನರನ್ನು ಕಂಟ್ರೋಲ್ ಮಾಡಲು ಸಾಧ್ಯವಾಗದೆ ಪೊಲೀಸರು 10ಕ್ಕೂ ಹೆಚ್ಚು ಬಾರಿ ಲಾಠಿ ಚಾರ್ಜ್​ ಮಾಡಿದ್ದಾರೆ.

ಕಾಲ್ತುಳಿತದಲ್ಲಿ ಅಸ್ವಸ್ಥಗೊಂಡವರನ್ನು ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ​ಲೇಡಿ ಕರ್ಜನ್ ಆಸ್ಪತ್ರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ : RCB ವಿಜಯೋತ್ಸವ – ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ!

Btv Kannada
Author: Btv Kannada

Read More