ಬೆಂಗಳೂರು : RCB ವಿಜಯೋತ್ಸವಕ್ಕೂ ಮುನ್ನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಘೋರ ದುರಂತ ಸಂಭವಿಸಿದೆ. ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಾವಿರಾರು ಸಂಖ್ಯೆಯಲ್ಲಿ ಆರ್‌ಸಿಬಿ ಅಭಿಮಾನಿಗಳು ಕಿಕ್ಕಿರಿದು ಜಮಾಯಿಸಿದ್ದರು. ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತಕ್ಕೆ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.
ಕಾಲ್ತುಳಿತದಲ್ಲಿ 20ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದು, ಅಸ್ವಸ್ಥರನ್ನು ಬೌರಿಂಗ್ ಆಸ್ಪತ್ರೆಗೆ ಸಾಗಿಸಲಾಯಿತು. ಬೌರಿಂಗ್ ಆಸ್ಪತ್ರೆಯಲ್ಲಿ ಮೃತರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ನೂಕುನುಗ್ಗಲಿನ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನ ಎಲ್ಲಾ ಗೇಟ್‌ಗಳನ್ನು ಬಂದ್ ಮಾಡಲಾಗಿದೆ. ಇದೀಗ ಸ್ಟೇಡಿಯಂ ಒಳಗೆ ಯಾರನ್ನು ಬಿಡುತ್ತಿಲ್ಲ. ಸ್ಟೇಡಿಯಂ ಒಳಗೆಯೂ ಜನ ಕಿಕ್ಕಿರಿದು ಸೇರಿದ್ದು, ಎಲ್ಲಾ ಗ್ಯಾಲರಿಯಲ್ಲೂ ಜನ ತುಂಬಿದ್ದಾರೆ. ಗೇಟ್ ಬಳಿ ಪೊಲೀಸ್ ಬಿಗಿ ಭದ್ರತೆ ನೀಡಲಾಗಿದ್ದು, ಸ್ಟೇಡಿಯಂ ಹೊರಗೆ ಸಹ ಯಾರನ್ನೂ ಬಿಡುತ್ತಿಲ್ಲ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ವಾತಾವರಣ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಇದನ್ನೂ ಓದಿ : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ – ಓರ್ವ RCB ಅಭಿಮಾನಿ ಬಲಿ, ಇಬ್ಬರ ಸ್ಥಿತಿ ಗಂಭೀರ!
