ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮದ ನಡುವೆ ಆಘಾತ, ಆಕ್ರಂದನ.. ಹುಚ್ಚೆದ್ದು ಕುಣಿಯುತ್ತಿದ್ದ ಅಭಿಮಾನಿಗಳ ಹೃದಯ ಕ್ಷಣದಲ್ಲೇ ಸ್ತಬ್ಧವಾಗಿದೆ. ಸಂಭ್ರಮಾಚರಣೆ ವೇಳೆ ಕೊನೆಯುಸಿರು.. ಇದಕ್ಕೆ ಸಾಕ್ಷಿ ಆಗಿದ್ದು ಸಿಲಿಕಾನ್ ಸಿಟಿಯ ಚಿನ್ನಸ್ವಾಮಿ ಸ್ಟೇಡಿಯಂ.
ಹೌದು.. ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷದ ಐಪಿಎಲ್ ಕಪ್ ಗೆದ್ದಿದೆ. ಈ ಸಂಭ್ರಮಾಚರಣೆ ಎಲ್ಲೆಡೆ ಮನೆ ಮಾಡಿರುವಾಗಲೇ ಭಾರೀ ದುರಂತ ಸಂಭವಿಸಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಿನ್ನೆ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಬಿಡದ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. 11 ಮಂದಿಯ ದಾರುಣ ಸಾವಿನ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸರಿಂದ ತನಿಖೆ ಮುಂದುವರಿದಿದೆ.
ಸಂಭ್ರಮದಲ್ಲಿ ಮೃತರು – ಅವರ ವಯಸ್ಸು
- ಭೂಮಿಕ- 20 ವರ್ಷ
- ಸಹನಾ-19 ವರ್ಷ
- ಪೂರ್ಣಚಂದ್ರ- 32 ವರ್ಷ
- ಚಿನ್ಮಯಿ- 19 ವರ್ಷ
- ದಿವಾನ್ಷಿ- 13 ವರ್ಷ
- ಶ್ರವಣ್- 20 ವರ್ಷ
- ದೇವಿ- 29 ವರ್ಷ
- ಶಿವಲಿಂಗ್- 17 ವರ್ಷ
- ಮನೋಜ್- 33 ವರ್ಷ
- ಅಕ್ಷತಾ-
- ಪ್ರಜ್ವಲ್- 21 ವರ್ಷ
ಇದನ್ನೂ ಓದಿ : RCB ವಿಜಯೋತ್ಸವದಲ್ಲಿ ಕಾಲ್ತುಳಿತ ಪ್ರಕರಣ – ಇಂದು ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ!
