RCB ಸಂಭ್ರಮಾಚರಣೆ – ನಮ್ಮ ಮೆಟ್ರೋದಲ್ಲಿ ದಾಖಲೆ ಪ್ರಯಾಣಿಕರ ಸಂಚಾರ.. ಎಷ್ಟು ಲಕ್ಷ ಜನ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಸಿಲಿಕಾನ್ ಸಿಟಿಯ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ವಿಜಯೋತ್ಸವ ಕಣ್ತುಂಬಿಕೊಳ್ಳಲು ದಾಖಲೆ ಮಟ್ಟದಲ್ಲಿ ಪ್ರಯಾಣಿಕರು ಮೆಟ್ರೋದಲ್ಲಿ ಸಂಚಾರ ಮಾಡಿದ್ದಾರೆ. ಈ ಮೊದಲು ಸ್ಟೇಡಿಯಂನಲ್ಲಿ ಕ್ರಿಕೆಟ್​ ಪಂದ್ಯಗಳು ಇದ್ದರೂ ಈ ಮಟ್ಟದಲ್ಲಿ ಜನರು ಓಡಾಡಿರಲಿಲ್ಲ. ಆದರೆ ಆರ್​ಸಿಬಿ ಟ್ರೋಫಿ ಗೆದ್ದು ಚಿನ್ನಸ್ವಾಮಿ ಮೈದಾನಕ್ಕೆ ಬರುತ್ತೋ ಎಂದು ಗೊತ್ತಾಯಿತೋ ಅವಾಗ 9 ಲಕ್ಷ ಕ್ಕೂ ಅಧಿಕ ಜನರು ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ವಿವಿಧ ಮಾರ್ಗಗಳಲ್ಲಿ ಗಮನಾರ್ಹವಾಗಿ ಪ್ರಯಾಣಿಕರ ಸಂಖ್ಯೆಯಲ್ಲಿ ಸುಮಾರು ಮೂರು ಪಟ್ಟು ಹೆಚ್ಚಳ ಕಂಡುಬಂದಿದೆ. ಮೆಟ್ರೋ ಮಾರ್ಗ 1ರಲ್ಲಿ 4,78,334 ಪ್ರಯಾಣಿಕರು ಮತ್ತು ಮಾರ್ಗ 2ರಲ್ಲಿ 2,84,674 ಪ್ರಯಾಣಿಕರು ಸಂಚರಿಸಿದ್ದಾರೆ. ಒಟ್ಟು 9,66,732 ಮಂದಿ ಪ್ರಯಾಣಿಕರು ಮೆಟ್ರೋದಲ್ಲಿ ಓಡಾಡಿದ್ದಾರೆ ಎಂದು ಬೆಂಗಳೂರು ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ತಿಳಿಸಿದೆ.

ಕೆಂಪೇಗೌಡ (ಕೆಜಿಡಬ್ಲ್ಯೂಎ) ಇಂಟರ್‌ಚೇಂಜ್‌ ನಿಲ್ದಾಣದಲ್ಲಿಯೇ 2,03,724 ಜನರು ಬೃಹತ್​ ಸಂಖ್ಯೆಯಲ್ಲಿ ಪ್ರಯಾಣ ಮಾಡಿದ್ದಾರೆ ಎಂದು ಬಿಎಂಆರ್‌ಸಿಎಲ್ ಮಾಹಿತಿ ನೀಡಿದೆ.

ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟ್ರೋಫಿ ಗೆದ್ದ ಖುಷಿಯಲ್ಲಿ ಸಂಭ್ರಮದ ನಡುವೆ ಆಘಾತ, ಆಕ್ರಂದನ ಎಲ್ಲವೂ ನಡೆದು ಹೋಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯೋತ್ಸವಕ್ಕೆ ಸಾಗರೋಪಾದಿಯಲ್ಲಿ ಅಭಿಮಾನಿಗಳು ಕ್ರೀಡಾಂಗಣದ ಬಳಿ ಸೇರಿದ್ದರು. ಕಾಲಿಡಲು ಸ್ಥಳವಿಲ್ಲದಷ್ಟು ಜಾಗ ಇರದ ಕಾರಣ ಕಾಲ್ತುಳಿತ ಸಂಭವಿಸಿ 11 ಅಭಿಮಾನಿಗಳು ಕೊನೆಯುಸಿರೆಳೆದ್ದಾರೆ.​

ಇದನ್ನೂ ಓದಿ : ಯಾವ ಸಂಭ್ರಮವೂ ಜೀವಕ್ಕಿಂತ ದೊಡ್ಡದಲ್ಲ – ಬೆಂಗಳೂರು ಕಾಲ್ತುಳಿತ ದುರಂತಕ್ಕೆ ನಟ ಸೋನು ಸೂದ್ ಕಂಬನಿ!

Btv Kannada
Author: Btv Kannada

Read More