ಬೆಂಗಳೂರು : ಆರ್‌ಸಿಬಿ ವಿಜಯೋತ್ಸವ ವೇಳೆ ಉಂಟಾದ ಭೀಕರ ಕಾಲ್ತುಳಿತದಲ್ಲಿ ಮೃತಪಟ್ಟ 11 ಮಂದಿಗೆ ಆರ್‌ಸಿಬಿಯಿಂದ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಆರ್‌ಸಿಬಿ ಫ್ರಾಂಚೈಸಿ, ” ಬೆಂಗಳೂರಿನಲ್ಲಿ ನಿನ್ನೆ ನಡೆದ ದುರದೃಷ್ಟಕರ ಘಟನೆಯು ಆರ್‌ಸಿಬಿ ಕುಟುಂಬಕ್ಕೆ ತೀವ್ರ ನೋವನ್ನುಂಟು ಮಾಡಿದೆ. ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ, ಆರ್‌ಸಿಬಿ ಮೃತರ ಹನ್ನೊಂದು ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿಗಳ ಆರ್ಥಿಕ ಸಹಾಯವನ್ನು ಘೋಷಿಸಿದೆ. ಇದಲ್ಲದೆ, ಈ ದುರಂತ ಘಟನೆಯಲ್ಲಿ ಗಾಯಗೊಂಡ ಅಭಿಮಾನಿಗಳನ್ನು ಬೆಂಬಲಿಸಲು ಆರ್‌ಸಿಬಿ ಕೇರ್ಸ್ ಎಂಬ ನಿಧಿಯನ್ನು ಸಹ ರಚಿಸಲಾಗುತ್ತಿದೆ” ಎಂದು ಹೇಳಿದೆ.
ಹಾಗೆಯೇ ನಮ್ಮ ಅಭಿಮಾನಿಗಳು ನಾವು ಮಾಡುವ ಎಲ್ಲದರಲ್ಲೂ ಯಾವಾಗಲೂ ಹೃದಯ ಭಾಗದಲ್ಲಿ ಇರುತ್ತಾರೆ. ನಾವು ದುಃಖದಲ್ಲಿ ಒಗ್ಗಟ್ಟಿನಿಂದ ಇರುತ್ತೇವೆ ” ಎಂದು RCB ಹೇಳಿದೆ. ರಾಜ್ಯ ಸರ್ಕಾರದ ವತಿಯಿಂದ ನಿನ್ನೆ ಈ ಅವಘಡದಲ್ಲಿ ಸಾವಿಗೀಡದವರ ಕುಟುಂಬಗಳಿಗೆ 10 ಲಕ್ಷ ರೂ ಪರಿಹಾರ ಘೋಷಿಸಲಾಗಿತ್ತು.
ಇದನ್ನೂ ಓದಿ : ಭಾರದ ಮನಸ್ಸಿನಲ್ಲೇ ಬೆಂಗಳೂರಿನಿಂದ ಮುಂಬೈಗೆ ಹೊರಟ ವಿರಾಟ್ ಕೊಹ್ಲಿ- ಅನುಷ್ಕಾ ಶರ್ಮಾ!
