ಕಾಲ್ತುಳಿತ ಕೇಸ್​ಗೆ ಬಿಗ್ ಟ್ವಿಸ್ಟ್… ಆರ್​ಸಿಬಿ ಮಾರ್ಕೆಟಿಂಗ್ ಹೆಡ್ ನಿಖಿಲ್ ಸೋಸಲೆ​​ ಸೇರಿ ಮೂವರು ಅರೆಸ್ಟ್​!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಈ ಕೇಸ್​ಗೆ ಸಂಬಂಧಿಸಿದಂತೆ ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿ ಹಾಗೂ ಡಿಎನ್​ಎ ಸಂಸ್ಥೆಯ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಆರ್.ಸಿ.ಬಿ ತಂಡದ ಮಾರ್ಕೆಟಿಂಗ್ ಹೆಡ್ ಆಗಿರೋ ನಿಖಿಲ್ ಸೋಸಲೆ, ಡಿಎನ್​ಎ ಸಂಸ್ಥೆಯ ಕಿರಣ್ ಮತ್ತು ಸುಮಂತ್ ಎಂಬುವವರನ್ನು ಬಂಧಿಸಿ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ನಿಖಿಲ್ ಸೋಸಲೆ
ನಿಖಿಲ್ ಸೋಸಲೆ

ಆರ್​ಸಿಬಿ ವಿಜಯೋತ್ಸವ ಕಾರ್ಯಕ್ರಮದಲ್ಲಿ ಚಿನ್ನಸ್ವಾಮಿಯಲ್ಲಿ ಬುಧುವಾರ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈ ಸಂಬಂಧ  ಕಮಿಷನರ್ ಸೇರಿ 5 ಪೊಲೀಸ್ ಅಧಿಕಾರಿಗಳನ್ನು ನಿನ್ನೆ ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಈ ಬೆನ್ನಲ್ಲೇ ಆರ್​ಸಿಬಿ ಮ್ಯಾನೇಜ್ಮೆಂಟ್ ಸಿಬ್ಬಂದಿಯನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ.

ಬಂಧಿತರು
ಬಂಧಿತರು

ಇದನ್ನೂ ಓದಿ : ತಡರಾತ್ರಿಯೇ ನೂತನ ಪೊಲೀಸ್ ಕಮಿಷನರ್ ಆಗಿ ಸೀಮಂತ್ ಕುಮಾರ್ ಸಿಂಗ್ ಅಧಿಕಾರ ಸ್ವೀಕಾರ!

 

Btv Kannada
Author: Btv Kannada

Read More