ಕಾಲ್ತುಳಿತ ಪ್ರಕರಣ – KSCAಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್!

ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ವಿರುದ್ಧ ಎಫ್​ಐಆರ್ ದಾಖಲಾಗಿತ್ತು. ಎಫ್​ಐಆರ್​ ರದ್ದು ಕೋರಿ ಕೆಎಸ್​ಸಿಎ ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್​​ ಷರತ್ತುಬದ್ಧ ರಿಲೀಫ್​ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಕೆಎಸ್‌ಸಿಎ ಅಧಿಕಾರಿಗಳ ವಿರುದ್ಧ ಬಲವಂತದ ಕ್ರಮ ಬೇಡ. ಆದರೆ, ವಿಚಾರಣೆಗೆ ಸಹಕರಿಸುವಂತೆ ಅರ್ಜಿದಾರರಿಗೆ ಷರತ್ತು ವಿಧಿಸಿದೆ. ಈ ಮೂಲಕ ಕೆಎಸ್​ಸಿಎ ಅಧ್ಯಕ್ಷ ರಘುರಾಮ್ ಭಟ್, ಕಾರ್ಯದರ್ಶಿ ಎ.ಶಂಕರ್, ಖಜಾಂಚಿ ಇ.ಎಸ್.ಜೈರಾಮ್‌ ಅವರಿಗೆ ರಿಲೀಫ್ ಸಿಕ್ಕಿದೆ. ಇನ್ನು ಆರೋಪಿಗಳಿಗೆ ತನಿಖೆಗೆ ಸಹಕರಿಸಬೇಕು ಎಂದಿರುವ ಕೋರ್ಟ್​, ಮುಂದಿನ ವಿಚಾರಣೆಯನ್ನು ಜೂನ್ 16ಕ್ಕೆ ಮುಂದೂಡಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಶ್ಯಾಮ್ ಸುಂದರ್ ಮತ್ತು ಕೆಎಸ್​ಸಿಎ ಪರ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ವಾದ ಮಂಡಿಸಿದರು. ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಇದನ್ನೂ ಓದಿ : ಸೃಜನ್ ಲೋಕೇಶ್ ಚೊಚ್ಚಲ ನಿರ್ದೇಶನದ “GST” ಚಿತ್ರ ಸದ್ಯದಲ್ಲೇ ತೆರೆಗೆ!

Btv Kannada
Author: Btv Kannada

Read More