ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತಕ್ಕೆ 11 ಜನ ಬಲಿಯಾಗಿದ್ದು, ಈ ಪ್ರಕರಣದಲ್ಲಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಇಂದು ಸಂಜೆ ನಾಲ್ವರು ಆರೋಪಿಗಳನ್ನು ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದಾರೆ.
ಕಿರಣ್, ನಿಖಿಲ್ ಸೋಸಲೆ, ಸುನೀಲ್ ಮ್ಯಾಥೋ, ಸುಮಂತ್ನ್ನು ಕಬ್ಬನ್ ಪಾರ್ಕ್ ಪೊಲೀಸರು ಕೋರ್ಟ್ಗೆ ಹಾಜರುಪಡಿಸಿದ್ದು, ಆರೋಪಿಗಳಿಗೆ ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ 41ನೇ ACMM ಕೋರ್ಟ್ ಆದೇಶ ಹೊರಡಿಸಿದೆ.
ಬಂಧಿತ ನಾಲ್ವರು ಆರೋಪಿಗಳು ಜೂನ್ 19ರವರೆಗೆ ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಅಧಿಕಾರಿಗಳಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ಆದರೆ DNA ಸಂಸ್ಥೆಯ ಸುನೀಲ್ ಮ್ಯಾಥೋ, ಕಿರಣ್ ಹಾಗೂ RCB ಮುಖ್ಯಸ್ಥ ನಿಖಿಲ್ ಸೋಸಲೆ, ಸಮಂತ್ಗೆ ಸದ್ಯ ಯಾವುದೇ ರಿಲೀಫ್ ಸಿಕ್ಕಿಲ್ಲ. ನಿಖಿಲ್ ಸೋಸಲೆ ಪರ ಹಿರಿಯ ವಕೀಲ ಸಂದೇಶ್ ಚೌಟ ಅವರ ವಾದ ಆಲಿಸಿದ ಹೈಕೋರ್ಟ್, ಅರ್ಜಿ ವಿಚಾರಣೆಯನ್ನು ಜೂನ್ 9 ಮಧ್ಯಾಹ್ನ 2.30ಕ್ಕೆ ಮುಂದೂಡಿತು.
ಇದನ್ನೂ ಓದಿ : ಕಾಲ್ತುಳಿತ ಪ್ರಕರಣ – KSCAಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್!
