ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಂದಿನಿಂದ SP ಶೋಭಾನ್ವಿತ ನೇತೃತ್ವದಲ್ಲಿ ಸಿಐಡಿ ತನಿಖೆ ಆರಂಭವಾಗಿಲಿದ್ದು, ತನಿಖಾಧಿಕಾರಿಗಳಾಗಿ ಡಿವೈಎಸ್ಪಿಗಳಾದ ಗೌತಮ್ ಹಾಗೂ ಪುರುಷೋತ್ತಮ್ರನ್ನು ನೇಮಕ ಮಾಡಲಾಗಿದೆ.
ಈಗಾಗಲೇ ಕಬ್ಬನ್ ಪಾರ್ಕ್ ಪೊಲೀಸರು ಕೇಸ್ ಫೈಲ್ನ್ನು ತನಿಖಾಧಿಕಾರಿಗಳಿಗೆ ವರ್ಗಾವಣೆ ಮಾಡಿದ್ದಾರೆ. ಇಂದು ಕಾಲ್ತುಳಿತ ಉಂಟಾದ ಸ್ಥಳಕ್ಕೆ ಸಿಐಡಿ ಅಧಿಕಾರಿಗಳ ತಂಡ ಭೇಟಿ ನೀಡಲಿದ್ದು, ಕಾಲ್ತುಳಿತ ಉಂಟಾಗಿದ್ದ ಗೇಟ್ ನಂಬರ್ 7, 19,18, 16, 21ರ ಬಳಿ ಪರಿಶೀಲನೆ ನಡೆಸಲಿದ್ದಾರೆ.
ಘಟನಾ ಸ್ಥಳ ಪರಿಶೀಲನೆ ಬಳಿಕ ಬಂಧಿತ ಆರೋಪಿಗಳನ್ನ ಕಸ್ಟಡಿಗೆ ಪಡೆಯಲು ತಯಾರಿ ಮಾಡಿಕೊಳ್ಳಲಾಗಿದೆ. ಬಹುತೇಕ ಸೋಮವಾರ ಬಂಧಿತ ನಾಲ್ವರು ಆರೋಪಿಗಳನ್ನ ಸಿಐಡಿ ತಂಡ ಕಸ್ಟಡಿಗೆ ಪಡೆಯಲಿದೆ. ಇಂದು ಸರ್ಕಾರಿ ರಜೆ ಮತ್ತು ನಾಳೆ ಭಾನುವಾರವಾದ್ದರಿಂದ ಸೋಮವಾರ ಬಾಡಿ ವಾರೆಂಟ್ ಮೇಲೆ ಆರೋಪಿಗಳನ್ನು ಕಸ್ಟಡಿಗೆ ಪಡೆಯಲು ತನಿಖಾಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ.
ಪ್ರಕರಣ ಸಂಬಂಧ ನಾಲ್ವರ ಬಂಧನ : ಕಬ್ಬನ್ ಪಾರ್ಕ್ ಇನ್ಸ್ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್ಎಸ್ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿತ್ತು. ಆರ್ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ನ A ಯನ್ನಾಗಿ ಮಾಡಿ ಎಫ್ಐಆರ್ ದಾಖಲಿಸಲಾಗಿತ್ತು. ಸದ್ಯ ಆರ್ಸಿಬಿ ಮಾರ್ಕೆಟಿಂಗ್ ಮುಖಸ್ಥ ಸೇರಿ ನಾಲ್ವರನ್ನು ಬಂಧಿಸಲಾಗಿದೆ.
ಇದನ್ನೂ ಓದಿ : ಹಾವೇರಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ – ಪ್ರಿಯಕರ ಹಾಗೂ ಅಣ್ಣನಿಂದಲೇ ನೀಚ ಕೃತ್ಯ!
