ಮೈಸೂರು : ಒಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವುದನ್ನು ವಿರೋಧಿಸಿ ಸಾವಿರಾರು ಜನ ಸೋಮವಾರ (ಫೆ.10) ರಾತ್ರೋರಾತ್ರಿ ಉದಯಗಿರಿ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯಿಂದಾಗಿ ಉದಗಿರಿಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.
ಇಂದು ಬೆಳಗ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ಕೊಟ್ಟಿದ್ದು, ಪೊಲೀಸ್ ಠಾಣೆಗೆ ಬರ್ತಿದ್ದಂತೆಯೇ ಡಿಸಿಪಿ ಮುತ್ತುರಾಜ್ ಠಾಣೆಯಿಂದ ಹೋಗುವಂತೆ ಮನವಿ ಮಾಡಿಕೊಂಡಿದ್ದಾರೆ.
ಬಳಿಕ ಪ್ರತಾಪ್ ಸಿಂಹ ಮಾತನಾಡಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸಮುದಾಯದ ಪುಂಡರು ಅಕ್ರಮಣ ಮಾಡಿದ್ದಾರೆ, ಮೈಸೂರಿನಲ್ಲಿ ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ ನಡೆದಿದೆ. ಪೊಲೀಸರನ್ನೇ ಗುರಿಯಾಗಿಸಿ ಟಿಪ್ಪು ಸಂತತಿ ಗಲಾಟೆ ಮಾಡಿದೆ, ಸಿದ್ದರಾಮಯ್ಯ ಆಡಳಿತ ಹೇಗಿದೆ ಎಂಬುದಕ್ಕೆ ಈ ಘಟನೆ ಸಾಕ್ಷಿ ಎಂದು ಗುಡುಗಿದ್ದಾರೆ.
ಒಂದು ಸಮುದಾಯದ ಪುಂಡರಿಗೆ ಸಿದ್ದರಾಮಯ್ಯ ಫ್ರೀ ಬಿಟ್ಟಿದ್ದಾರೆ. ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿ ಇರುತ್ತಿರೋ ಗೊತ್ತಿಲ್ಲ, ಈಗಲಾದರೂ ಸಿದ್ದರಾಮಯ್ಯ ಖಡಕ್ ಆಗಿ ಕೆಲಸ ಮಾಡಲಿ. ಸಿದ್ದರಾಮಯ್ಯ ಎಷ್ಟು ಅಸಮರ್ಥ ಸಿಎಂ ಎಂಬುದಕ್ಕೆ ಈ ಘಟನೆ ಸಾಕ್ಷಿ ಎಂದು ಸಿದ್ದರಾಮಯ್ಯ ವಿರುದ್ಧ ಪ್ರತಾಪ್ ಸಿಂಹ ಕಿಡಿ ಕಾರಿದ್ದಾರೆ.
ಇದನ್ನೂ ಓದಿ :http://ಉದಯಗಿರಿ ಠಾಣೆ ಮೇಲೆ ಉದ್ರಿಕ್ತರಿಂದ ಕಲ್ಲು ತೂರಾಟ – ಘಟನೆ ಬಗ್ಗೆ ADGP ಹಿತೇಂದ್ರ ಹೇಳಿದ್ದೇನು?
