ಆನೇಕಲ್ : ಅಕ್ರಮ ಸಂಬಂಧ ಹಿನ್ನೆಲೆ ಗಂಡನಿಂದಲೇ ಪತ್ನಿ ಭೀಕರವಾಗಿ ಹತ್ಯೆಯಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನಲ್ಲಿ ನಡೆದಿದೆ. ಹೆನ್ನಾಗರ ಸಮೀಪದ ಕಾಚನಾಯಕನಹಳ್ಳಿ ನಿವಾಸಿ ಶಂಕರ್ (28) ಪತ್ನಿಯ ರುಂಡ ಕಡಿದ ಆರೋಪಿ. ಹೆಬ್ಬಗೋಡಿ ನಿವಾಸಿ ಮಾನಸ (26) ಕೊಲೆಯಾದ ಮಹಿಳೆ.
ಪತ್ನಿ ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಹಿನ್ನೆಲೆ ಪತಿ ಆಕೆಯ ರುಂಡ ಕಡಿದು ಸೂರ್ಯನಗರ ಪೊಲೀಸ್ ಠಾಣೆಗೆ ಕೊಂಡೊಯ್ದಿದು ಶರಣಾಗಿದ್ದಾನೆ.
ಮಾನಸ ಮತ್ತು ಶಂಕರ್ ಪ್ರೀತಿಸಿ ಮದುವೆಯಾಗಿದ್ದರು. ತಿಂಗಳ ಹಿಂದಷ್ಟೇ ಹೀಲಲಗೆ ಗ್ರಾಮದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು. ಇದೇ ತಿಂಗಳ 3ನೇ ತಾರೀಖು ಶಂಕರ್ ಕೆಲಸದ ನಿಮಿತ್ತ ತೆರಳಿದ್ದ, ಹೊರಡುವಾಗ ಮಾರನೆ ದಿನ ಬರುವುದಾಗಿ ಹೇಳಿದ್ದ. ಆದ್ರೆ ಕೆಲಸ ಬೇಗ ಮುಗಿದ ಹಿನ್ನೆಲೆ ಪತ್ನಿ ಒಬ್ಬಳೆ ಇರ್ತಾಳೆಂದು ತಡರಾತ್ರಿಯೇ ವಾಪಸ್ ಆಗಿದ್ದ. ಆದ್ರೆ ಗಂಡನ ಚಿಂತೆಯೇ ಇಲ್ಲದೇ ಪತ್ನಿ ಪ್ರಿಯಕರನೊಂದಿಗೆ ಚಕ್ಕಂದವಾಡ್ತಾ ಇರುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿದ್ದಳು.
ಇದರಿಂದ ಆಕ್ರೋಶಗೊಂಡ ಪತಿ ಶಂಕರ್ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ. ನೀನು ನನಗೆ ಬೇಡ ಅಂತ ಪ್ರಿಯಕರನ ಜೊತೆಗೇ ಕಳಿಸಿದ್ದ. ಆದ್ರೆ ಪತ್ನಿ ಮಾನಸ ಮಾತ್ರ ಪದೇ ಪದೇ ಟಾರ್ಚರ್ ಮಾಡುತ್ತಿದ್ದಳಂತೆ. ನಿನ್ನೆ ರಾತ್ರಿ ಸಹ ಮನೆಗೆ ಬಂದು ಗಲಾಟೆ ಮಾಡಿದ್ದಳಂತೆ. ಇದರಿಂದ ಬೇಸತ್ತ ಪತಿ ಆಕೆಯ ತಲೆ ಕಡೆದು ಠಾಣೆಗೆ ಸೂರ್ಯನಗರ ಪೊಲೀಸ್ ಠಾಣೆಗೆ ತೆಗದುಕೊಂಡು ಬಂದಿದ್ದಾನೆ. ನಂತರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಆರೋಪಿಯನ್ನ ಬಂಧಿಸಿ ಪ್ರಕರಣ ದಾಖಲಿಸಿದ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ‘ಕರಿಕಾಡ’ ಚಿತ್ರದ ಟೈಟಲ್ ಟೀಸರ್ ಬಿಡುಗಡೆಗೊಳಿಸಿದ ಡೈರೆಕ್ಟರ್ ಸಂತೋಷ್ ಆನಂದ್ರಾಮ್!
