ಕೋಲಾರ : ಕೆಜಿಎಫ್ ತಾಲೂಕಿನ ಕೃಷ್ಣಾವರಂ ಬಳಿ ಚೆನ್ನೈ- ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇ ಸಂಪರ್ಕ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.
ಕೃಷ್ಣಾವರಂ ಗ್ರಾಮದ ಆಕಾಶ್ (33) ಹಾಗೂ ಜಾನ್ (32) ಮೃತ ದುರ್ದೈವಿಗಳು. ಕಾರಿನಲ್ಲಿದ್ದ ಇನ್ನು ಮೂವರು ಅಪ್ಪು, ತಮಿಳರಸನ್ ಹಾಗೂ ನಾಗರಾಜು ಎಂಬುವರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ತಕ್ಷಣ ಬೆಮೆಲ್ ನಗರದ ಸಂಭ್ರಮ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗಿದೆ.
ಚೆನೈ ಬೆಂಗಳೂರು ಎಕ್ಸ್ಪ್ರೆಸ್ ಕಾರಿಡಾರ್ ಹೈವೇ ಸಂಪರ್ಕ ರಸ್ತೆ ಬಳಿ ಸ್ವಿಪ್ಟ್ ಕಾರು ಡಿವೈಡರ್ಗೆ ಭಯಾನಕವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಕಣ್ಮುಚ್ಚಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಗುದ್ದಿದ ರಭಸಕ್ಕೆ ಕಾರು ಎಲ್ಲ ನಜ್ಜುಗುಜ್ಜಾಗಿದೆ. ಬೆಮೆಲ್ ನಗರದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ : ಮೋದಿ ಸಾಧನೆ ಅಳೆಯುವ ಅರ್ಹತೆ ಸಿದ್ದರಾಮಯ್ಯಗಿಲ್ಲ – ಝಿರೋ ಮಾರ್ಕ್ಸ್ ಎಂದಿದ್ದ ಸಿಎಂಗೆ ಪ್ರತಾಪ್ ಸಿಂಹ ಟಾಂಗ್!
