ಬೆಂಗಳೂರು : ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಸುವ ‘ಕುಸುಮ್ ಸಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ನಾಳೆ (ಜೂನ್ 11) ಚಾಲನೆ ನೀಡಲಿದ್ದು, ಈ ಯೋಜನೆ ಮೂಲಕ 2 ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಗುರಿಯಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಪ್ರತಿ ಮೆ.ವ್ಯಾಟ್ ವಿದ್ಯುತ್ ಉತ್ಪಾದ ನೆಗೆ 3-4 ಕೋಟಿ ವೆಚ್ಚತಗುಲುತ್ತದೆ. ಈ ಪೈಕಿ 1 ಕೋಟಿ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತದೆ. ಸದ್ಯ ಟೆಂಡರ್ ಕರೆದು 2,400 ಮೆ.ವ್ಯಾಟ್ ವಿದ್ಯುತ್ ಉತ್ಪಾದನೆ ಸಾಮರ್ಥ್ಯದ ಘಟಕಗಳ ಅಳವಡಿಕೆಗೆ ನಿರ್ಧರಿಸಿದ್ದು, 9,500 ಕೋಟಿಯಿಂದ 10,000 ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆಯಿದೆ ಎಂದು ಹೇಳಿದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಜೂ.11ರಂದು ಬುಧವಾರ ಬೆಳಗ್ಗೆ 10.30ಕ್ಕೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವರು ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಕುಸುಮ್-ಸಿ ಯೋಜನೆಯಡಿ ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್‌ಗಳ ಬಳಿ ಸೋಲಾರ್ ಘಟಕಗಳನ್ನು ಸ್ಥಾಪಿಸಿ, ವಿದ್ಯುತ್ ಉತ್ಪಾದಿಸಲಾಗುವುದು. ಬಳಿಕ ಅಲ್ಲಿಂದ ಫೀಡರ್‌ಗಳ ಮೂಲಕ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಒದಗಿಸಲಾಗುವುದು. ಸ್ಥಳೀಯವಾಗಿಯೇ ವಿದ್ಯುತ್ ಉತ್ಪಾದಿಸಿ ಪೂರೈಸುವುದರಿಂದ ಗುಣಮಟ್ಟದ ವಿದ್ಯುತ್ ಲಭ್ಯವಾಗುತ್ತದೆ. ಟ್ರಾನ್ಸ್ ಫರ್ಮ‌್ರಗಳ ಮೇಲಿನ ಹೊರೆಯೂ ಇದರಿಂದ ತಗುತ್ತದೆ ಎಂದರು.
ರೈತರಿಗೆ ಹಗಲಿನಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಗುರಿ : ಗೌರಿಬಿದನೂರು ತಾಲೂ ಕಿನ ತೊಂಡೇಬಾವಿ ಹೋಬಳಿ ಹನುಮೇನಹಳ್ಳಿ ಮತ್ತು ಚರಕಮಟ್ಟೇನಹಳ್ಳಿಯ ಸುಮಾರು 60 ಎಕರೆ ಪ್ರದೇಶ ದಲ್ಲಿ 20 ಮೆ.ವ್ಯಾ. ಸಾಮ ರ್ಥದಲ್ಲಿ ಸೋಲಾರ್‌ಘಟಕ ಸ್ಥಾಪಿಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ ಕುಸುಮ್- ಸಿ ಯೋಜನೆಯಡಿ ಸ್ಥಾಪಿಸಲಾ ಅತಿದೊಡ್ಡ ಘಟಕವಿದು. ಗಿರುವ ಹೀಗಾಗಿ ಗೌರಿಬಿದನೂರಿನಲ್ಲಿ ಯೋಜನೆ ಉದ್ಘಾಟಿಸಲು ನಿರ್ಧರಿಸಲಾಗಿದೆ. ಇಲ್ಲಿ ಖಾಸಗಿ ಜಮೀನನ್ನು 25 ವರ್ಷಕ್ಕೆ ಭೋಗ್ಯಕ್ಕೆ ಪಡೆಯಲಾಗಿದೆ ಎಂದು ಸಚಿವರು ವಿವರಿಸಿದರು.
6.19 ಲಕ್ಷಪಂಪ್‌ಸೆಟ್‌ಗಳಿಗೆ ವಿದ್ಯುತ್ : 2,400 ಮೆಗಾವ್ಯಾಟ್ ಸೋಲಾರ್ ವಿದ್ಯುತ್ ಉತ್ಪಾದನೆಯಿಂದ 6.19 ಲಕ್ಷ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ವೇಳೆ ಗುಣಮಟ್ಟದ ವಿದ್ಯುತ್ ಸರಬರಾಜು ಮಾಡಬಹುದು. ಸುಮಾರು 200 ಮೆ. ವ್ಯಾ. ಸಾಮರ್ಥ್ಯದ ಸೋಲಾರ್‌ಘಟಕ ಗಳ ನಿರ್ಮಾಣ ಕಾರ್ಯ ಪೂರ್ಣಗೊಂ ಡಿದ್ದು, ಕೆಲವೇ ತಿಂಗಳಲ್ಲಿ 93 ಸ್ಥಳಗಳಲ್ಲಿ 545 ಮೆ.ವ್ಯಾ. ಸಾಮರ್ಥ್ಯದ ಸೋಲಾ ಘಟಕಗಳು ಚಾಲನೆಗೊಳ್ಳಲಿವೆ. ಡಿಸೆಂಬರ್ ವೇಳೆಗೆ 2,400 ಮೆ.ವ್ಯಾ. ಸಾಮರ್ಥದ ಸೌರ ಘಟಕಗಳ ಸ್ಥಾಪನೆ ಗುರಿ ಸಾಧಿಸುತ್ತೇವೆ. ಖಾಸಗಿಸೌರ ಘಟಕ ಸ್ಥಾಪಿಸಿ ವಿದ್ಯುತ್ ಉತ್ಪಾದಿಸುತ್ತಾರೆ. ಅದನ್ನು ಕೆಇಆರ್‌ಸಿ ನಿಗದಿ ಮಾಡಿರುವಂತೆ ಕ3.17 ಪ್ರತಿ ಯನಿಟ್‌ನಂತೆ ಖರೀದಿಸ ಲಾಗುವುದು ಎಂದು ಹೇಳಿದರು.
ಇದನ್ನೂ ಓದಿ : ಭೀಕರವಾಗಿ ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು – ಸ್ಥಳದಲ್ಲೇ ಇಬ್ಬರು ಸಾವು!
