ಮುಜರಾಯಿ ದೇವಾಲಯಗಳಲ್ಲಿ ಇನ್ಮುಂದೆ ನೀರಿನ ಬಾಟಲ್, ಪ್ಲಾಸ್ಟಿಕ್‌ ಬಳಕೆ ಸಂಪೂರ್ಣ ನಿಷೇಧ!

ಬೆಂಗಳೂರು : ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ನೀರಿನ ಬಾಟಲ್‌ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್‌ ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ನಿನ್ನೆ ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್‌ ಮುಕ್ತ ದೇವಾಲಯ ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್‌ ಬಳಕೆ ಮಾಡಬಾರದು ಎಂದು ಸೂಚಿಸಿದ್ದಾರೆ.

ಈ ಆದೇಶ ಜಾರಿಗೆ 2 ತಿಂಗಳು ಸಮಯ ಕೊಡಲಾಗಿದ್ದು, ಈಗಾಗಲೇ ಪ್ಲಾಸ್ಟಿಕ್‌ ಪದಾರ್ಥಗಳು ತೆಗೆದುಕೊಂಡಿದ್ದರೆ ಅದನ್ನು ಬಳಕೆ ಮಾಡಬಹುದು. ಆಗಸ್ಟ್ 15 ರಿಂದ ದೇವಾಲಯಗಳಲ್ಲಿ ಪ್ಲಾಸ್ಟಿಕ್‌ ಬಳಕೆಗೆ ಅವಕಾಶ ಇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ – BBMPಯಿಂದ ಹೊಸ ನಿಯಮ ಜಾರಿ.. ಯಾವಾಗಿಂದ ಅನ್ವಯ?

Btv Kannada
Author: Btv Kannada

Read More