ನೆಲಮಂಗಲದಲ್ಲಿ ಎರಡು ಸ್ಕೂಲ್ ಬಸ್​ಗಳ ಮಧ್ಯೆ ಭೀಕರ ಅಪಘಾತ – ತಪ್ಪಿದ ಭಾರೀ ಅನಾಹುತ!

ಬೆಂಗಳೂರು : ಎರಡು ಸ್ಕೂಲ್ ಬಸ್​ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಬಳಿಯ ಮಾದಾವಾರದ ನೈಸ್ ರಸ್ತೆಯ ಪಿಕಾಕ್ ಬಡಾವಣೆಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಒಂದು ಸ್ಕೂಲ್ ಬಸ್ ಪಲ್ಟಿಯಾಗಿದ್ದು, ಭಾರೀ ಅನಾಹುತ ತಪ್ಪಿದೆ.

ಪಲ್ಟಿಯಾದ ಸ್ಕೂಲ್ ಬಸ್ ಬೆಂಗಳೂರು ಉತ್ತರ ತಾಲೂಕಿನ ಡೆಲ್ಲಿ ಪಬ್ಲಿಕ್ ಶಾಲೆಯದ್ದು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಶಾಲಾ ಪುಟಾಣಿ ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ.

ಶಾಲಾ ಬಸ್ ಚಾಲಕರ ನಿರ್ಲಕ್ಷ್ಯದಿಂದಾಗಿ ಅಪಘಾತ ನಡೆದಿದ್ದು, ಕೆಲ ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಘಟನೆಯಿಂದ ಮಕ್ಕಳ ಪೋಷಕರು ಆತಂಕದಲ್ಲಿದ್ದಾರೆ. ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಕೇರಳದ ಆಳ ಸಮುದ್ರಲ್ಲಿ ಬೃಹತ್ ಕಂಟೈನರ್ ​ಹಡಗು ಸ್ಫೋಟ – 18 ಸಿಬ್ಬಂದಿಯ ರಕ್ಷಣೆ, ನಾಲ್ವರು ನಾಪತ್ತೆ!

Btv Kannada
Author: Btv Kannada

Read More