ಕಾಲ್ತುಳಿತ ಪ್ರಕರಣ – ಪಿಐಎಲ್​ ವಿಚಾರಣೆ ಜೂ. 12ಕ್ಕೆ ಮುಂದೂಡಿದ ಹೈಕೋರ್ಟ್!

ಬೆಂಗಳೂರು : ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ 11 ಅಮಾಯಕರ ಸಾವು ರಾಜ್ಯ ಸರ್ಕಾರಕ್ಕೆ ಭಾರೀ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್​ ಜೊತೆ​ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್‌, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೆ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.

ದುರಂತದ ಬಳಿಕ ಯಾವುದೇ ಪ್ರಕರಣಗಳನ್ನು ದಾಖಲಾಗಿರಲಿಲ್ಲ. ಹೈಕೋರ್ಟ್​ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್​ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಲ್ಲಿ ಇಂದು ವಿಚಾರಣೆ ನಡೆದಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ಜೂ.12 ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ : ರಾಜ್ಯ ಕಾಂಗ್ರೆಸ್​​ನಲ್ಲಿ ಶೀಘ್ರವೇ ಭಾರೀ ಬದಲಾವಣೆ.. ಬೆಳಗಾವಿ ಸಾಹುಕಾರ್​ ಸತೀಶ್‌ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಫಿಕ್ಸ್​​?

Btv Kannada
Author: Btv Kannada

Read More