ಯಲಹಂಕ : ರಾಜ್ಯದಲ್ಲಿ ದಿನನಿತ್ಯ ಬಳಸುವ ವಸ್ತುಗಳ ಬೆಲೆ, ಮೆಟ್ರೋ ದರ ಏರಿಕೆ ಸೇರಿದಂತೆ ಒಂದಾದ ಮೇಲೆ ಒಂದರಂತೆ ವಸ್ತುಗಳ ಬೆಲೆ ಏರಿಕೆ ಆಗುತ್ತಿದೆ. ಹಾಗಾಗಿ ಸರ್ಕಾರದ ಹಲವು ನ್ಯೂನ್ಯತೆಗಳ ವಿರುದ್ಧ ಜನರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ಯಾಟರಾಯನಪುರದಲ್ಲಿ ಜನಾಕ್ರೋಶ ಯಾತ್ರೆ ನಡೆಯುತ್ತಿದೆ.
ಬಿಜೆಪಿ ಮುಖಂಡ ತಮ್ಮೇಶ್ ಗೌಡ ನೇತೃತ್ವದಲ್ಲಿ ನಡೆಯುತ್ತಿದ್ದ ಜನಾಕ್ರೋಶ ಯಾತ್ರೆಗೆ ಈಗ ಪೊಲೀಸರು ಅಡ್ಡಿ ಪಡಿಸಿದ್ದಾರೆ. ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿದ್ದ ತಮ್ಮೇಶಗೌಡ ಸೇರಿದಂತೆ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಗೃಹಬಂಧನದಲ್ಲಿಟ್ಟಿದ್ದಾರೆ. ಗೃಹಬಂಧನದಲ್ಲಿರಿಸಲು ಕುಮ್ಮಕ್ಕು ನೀಡಿದ ಸಚಿವ ಕೃಷ್ಣಬೈರೇಗೌಡ ಅವರ ವಿರುದ್ಧ ಇದೀಗ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ : ಹೊಸ ಚಿತ್ರ ಘೋಷಿಸಿದ ರವಿ ಮೋಹನ್.. ‘ಬ್ರೋಕೋಡ್’ ಮೂಲಕ ನಿರ್ಮಾಣಕ್ಕಿಳಿದ ತಮಿಳು ನಟ!

Author: Btv Kannada
Post Views: 711