ದೆಹಲಿ : ಕಾಲ್ತುಳಿತ ಪ್ರಕರಣ ಕಾಂಗ್ರೆಸ್ ಸರ್ಕಾರಕ್ಕೆ ಸದ್ಯ ದೊಡ್ಡ ತಲೆಬಿಸಿ ಆಗಿದೆ. 11 ಮಂದಿ ಸಾವಿನ ಕಪ್ಪು ಚುಕ್ಕೆ ಸರ್ಕಾರಕ್ಕೆ ಅಂಟಿದೆ. ಘಟನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕಾರಣ ಎಂದು ವಿಪಕ್ಷಗಳು ಬೊಟ್ಟು ಮಾಡಿ ತೋರಿಸುತ್ತಿವೆ. ಇತ್ತ ಕಾಲ್ತುಳಿತ ಪ್ರಕರಣವನ್ನು ಕಾಂಗ್ರೆಸ್ ಹೈಕಮಾಂಡ್ ಕೂಡ ಬಹಳ ಗಂಭೀರವಾಗಿ ಪರಿಗಣಿಸಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ಗೆ ರಾಹುಲ್ ಗಾಂಧಿ ಅವರಿಂದ ಬುಲಾವ್ ಬಂದಿದ್ದು, ವರದಿ ನೀಡಲೆಂದೇ ಸಿದ್ದರಾಮಯ್ಯ, ಡಿಕೆಶಿ ಇಂದು ದೆಹಲಿಗೆ ತೆರಳಿದ್ದರು.
ಈ ವೇಳೆ ಕಾಲ್ತುಳಿತ ಪ್ರಕರಣದ ಬಗ್ಗೆ ಸಿಎಂ, ರಾಹುಲ್ ಗಾಂಧಿಗೆ ಸಂಪೂರ್ಣ ಮಾಹಿತಿ ನೀಡಿದ್ದು, ಹೈಕಮಾಂಡ್ ಮುಂದೆ ಸಿಎಂ, ಡಿಸಿಎಂ ಪ್ರತ್ಯೇಕವಾಗಿ ವರದಿ ಮಂಡನೆ ಮಾಡಿದ್ದಾರೆ. ನಂತರ ಅಹಿತಕರ ಘಟನೆ ಬಗ್ಗೆ ಶೀಘ್ರದಲ್ಲೇ ಹೊಸ ಕಾಯ್ದೆ ತರೋದಾಗಿ ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಇನ್ನು ರಾಜ್ಯದಲ್ಲಿ ಈ ರೀತಿಯ ಅಹಿತಕರ ಘಟನೆ ಸಂಭವಿಸದಂತೆ ಎಚ್ಚರವಹಿಸಿ ಎಂದು ರಾಹುಲ್ ಗಾಂಧಿ ಇಬ್ಬರಿಗೂ ಸೂಚನೆ ನೀಡಿದ್ದಾರೆ.
ಹಾಗೆಯೇ ವಿಪಕ್ಷಗಳ ಟೀಕೆಗಳಿಗೆ ಸಮರ್ಥವಾಗಿ ಉತ್ತರ ನೀಡಿ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಬಾರದು. ಡ್ಯಾಮೇಜ್ ಆಗದಂತೆ ನೋಡಿಕೊಳ್ಳುವ ಜವಾಬ್ದಾರಿ ನಿಮ್ಮದು ಎಂದು ರಾಜ್ಯ ನಾಯಕರಿಗೆ ರಾಹುಲ್ ಗಾಂಧಿ ಸೂಚಿಸಿದ್ದಾರೆ.
ಇದನ್ನೂ ಓದಿ : ಮುಡಾ ಸೈಟ್ ಅಕ್ರಮ ಕೇಸ್ – ಬರೋಬ್ಬರಿ 100 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED!
