ರಾಜ್ಯದಲ್ಲಿ ಜಾತಿ ಜನಗಣತಿ ಮರು ಸರ್ವೇ – ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

ದೆಹಲಿ : ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. RCB ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ. ಹಾಗೆಯೇ ಜಾತಿ ಜನಗಣತಿಯೂ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ಇನ್ನು ಜಾತಿ ಜನಗಣತಿ ಮರು ಸರ್ವೇ ಮಾಡುವ ಬಗ್ಗೆಯೂ ಸಹ ಸ್ವತಃ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ನಾಯಕರ ಸಭೆ ನಂತರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಮಾತನಾಡಿದರು. ಇಂದಿನ ಸಭೆಯಲ್ಲಿ ಜಾತಿ ಜನಗಣತಿಯ ಬಗ್ಗೆ ಚರ್ಚೆ ಮಾಡಿದ್ದೇವೆ. ಜೂನ್ 12ನೇ ತಾರೀಖಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ನಡೆಸಲಾಗುವುದು ಎಂದಿರುವ ಕಾಂಗ್ರೆಸ್ ನಾಯಕರು 60, 80, 90 ದಿನಗಳ ಕಾಲ‌ ಮಿತಿಯಲ್ಲಿ ವರದಿ ತರಲು ತೀರ್ಮಾನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರು ಜೂನ್ 12ರ ಗುರುವಾರ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಗುರುವಾರದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ, ಒಳ ಮೀಸಲಾತಿ ಚರ್ಚೆ ನಡೆಸಲಿದ್ದು, ಕೇಂದ್ರ ಸರ್ಕಾರ ಜಾತಿ ಜನಗಣತಿಗೂ ಮುನ್ನ ಜಾರಿಗೆ ತರಲು ಕಾಂಗ್ರೆಸ್ ನಾಯಕರು ಮುಂದಾಗಿದ್ದಾರೆ.

ಇದನ್ನೂ ಓದಿ : ಅಹಿತಕರ‌‌ ಘಟನೆ ಬಗ್ಗೆ ಶೀಘ್ರದಲ್ಲೇ ಹೊಸ ಕಾಯ್ದೆ – ರಾಹುಲ್ ಗಾಂಧಿಗೆ ಸಿದ್ದು ಭರವಸೆ!

Btv Kannada
Author: Btv Kannada

Read More