ಆನೇಕಲ್ : ಆಟವಾಡ್ತಿದ್ದಾಗ ವಿದ್ಯುತ್ ಶಾಕ್ ಹೊಡೆದು 11 ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ.
ನಾರಾಯಣಘಟ್ಟ ಗ್ರಾಮದ ತನಿಷ್ಕಾ(11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ಹೊಡೆದಿದೆ.
ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ. ಆಸ್ಪತ್ರೆ ಮುಂಭಾಗ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ‘DD ನೆಕ್ಸ್ಟ್ ಲೆವೆಲ್’ OTT ಎಂಟ್ರಿಗೆ ರೆಡಿ – ಜೂ.13ರಿಂದ Zee5ನಲ್ಲಿ ಸ್ಟ್ರೀಮಿಂಗ್!

Author: Btv Kannada
Post Views: 235