ಕೋಲಾರ : ಇಂದು ಕೋಲಾರದ ಶ್ರೀನಿವಾಸಪುರ ಬಂದ್ಗೆ ಕರೆ ನೀಡಲಾಗಿದೆ. ಮಾವು ಬೆಂಬಲ ಬೆಲೆಗೆ ಒತ್ತಾಯಿಸಿ ಇಂದು ಶ್ರೀನಿವಾಸಪುರ ಬಂದ್ಗೆ ಕರೆ ನೀಡಲಾಗಿದ್ದು, ಬೆಳ್ಳಂಬೆಳಗ್ಗೆ ಹೋರಾಟಗಾರರು ಬೀದಿಗಿಳಿದಿದ್ದಾರೆ.ಬಂದ್ಗೆ ವ್ಯಾಪಾಕ ಬೆಂಬಲ ವ್ಯಕ್ತವಾಗಿದ್ದು, ಪಟ್ಟಣದಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಜೊತೆಗೆ ಖಾಸಗಿ ಶಾಲೆಗಳ ಒಕ್ಕೂಟ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬಸ್ ಸಂಚಾರವನ್ನು ಬಂದ್ ಮಾಡಲಾಗಿದೆ.
ಬೆಳ್ಳಂಬೆಳಗ್ಗೆ ಮಾವು ಬೆಂಬಲ ಬೆಲೆಗೆ ಒತ್ತಾಯಿಸಿ ರಸ್ತೆಗಿಳಿದ ಮಾವು ಬೆಳೆಗಾರರು ರಸ್ತೆಗೆ ಮಾವು ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಬಲ ಬೆಲೆ ಘೋಷಣೆಗೆ ಒತ್ತಾಯ ಮಾಡಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸರ್ಕಾರ ಸ್ಪಂದಿಸ್ತಿಲ್ಲ ಎಂದು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಶ್ರೀನಿವಾಸಪುರ ಪಟ್ಟಣದ ಬಸ್ ನಿಲ್ದಾಣ ವೃತ್ತದಲ್ಲಿ ಮಾವು ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಮಾವಿಗೆ ಬೆಂಬಲ ಬೆಲೆ ಸಿಗದೇ ರೈತರು ಪರದಾಡುವಂತಾಗಿದ್ದು, ಪ್ರತಿ ಕೆಜಿ ಮಾವಿಗೆ 10 ರಿಂದ 15 ರೂಪಾಯಿ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
