ಬಳ್ಳಾರಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಇಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಈ ದಾಳಿ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕೋಟಿ ಕೋಟಿ ಹಣ ಹಂಚಿಕೆ ಮಾಡಿಕೊಂಡಿದ್ದಾರೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ನಡೆಯುತ್ತಿದೆ.
ವಾಲ್ಮೀಕಿ ನಿಗಮದ ಅನುದಾನವನ್ನು ಚುನಾವಣೆಯಲ್ಲಿ ಮತದಾರರಿಗೆ ಹಣ ನೀಡಲು ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಸುಮಾರು 21 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ಹಂಚಲಾಗಿದೆ ಎನ್ನಲಾಗಿದೆ. ಈ ಹಣವನ್ನು ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಕಂಪ್ಲಿ ಮತ್ತು ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಾಪಕವಾಗಿ ಹಂಚಲಾಗಿದೆ ಎಂಬುದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಇದೀಗ ಈ ಹಣಕಾಸು ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಬಳ್ಳಾರಿ ಜಿಲ್ಲೆಯ ಪ್ರಮುಖ ರಾಜಕಾರಿಗಳ ನಿವಾಸ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ED ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇಡಿ ದಾಳಿಗೆ ಒಳಗಾದ ಪ್ರಮುಖ ನಾಯಕರು:
- ಬಳ್ಳಾರಿ ಲೋಕಸಭಾ ಸಂಸದ – ತುಕಾರಾಂ (ಸಂಡೂರು)
- ಬಳ್ಳಾರಿ ನಗರ ಶಾಸಕ – ನಾರಾ ಭರತ್ ರೆಡ್ಡಿ
- ಕೂಡ್ಲಿಗಿ – ಶಾಸಕ ಡಾ. ಶ್ರೀನಿವಾಸ
- ಕಂಪ್ಲಿ ಶಾಸಕ – ಗಣೇಶ್
- ಮಾಜಿ ಸಚಿವ ನಾಗೇಂದ್ರ ಪಿಎ ಗೋರ್ವಧನ್ ಮನೆ ಮೇಲೂ ದಾಳಿ
ಎಂಟು ತಂಡಗಳಲ್ಲಿ ಕಾರ್ಯಾಚರಣೆ : ದೆಹಲಿಯಿಂದ ಬಂದಿರುವ ಇಡಿ ಅಧಿಕಾರಿಗಳು ಎಂಟು ತಂಡಗಳಲ್ಲಿ ವಿಭಜನೆಯಾಗಿ ಬೆಳಿಗ್ಗೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದು, ಶಾಸಕರು ಹಾಗೂ ಸಂಸದರ ನಿವಾಸ ಹಾಗೂ ಗೃಹ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಹಲವು ದಾಖಲೆಗಳು ಹಾಗೂ ಲ್ಯಾಪ್‌ಟಾಪ್, ಮೊಬೈಲ್, ಬ್ಯಾಂಕ್ ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
ಇದನ್ನೂ ಓದಿ : ಮಾವಿನ ಹಣ್ಣಿನ ಬೆಲೆ ಕುಸಿತ : ಇಂದು ಕೋಲಾರದ ಶ್ರೀನಿವಾಸಪುರ ಬಂದ್.. ಶಾಲೆಗಳಿಗೆ ರಜೆ, ಬಸ್ ಓಡಾಟ ಇಲ್ಲ!
