ಮಂಡ್ಯ : ಸಕ್ಕರೆನಾಡು ಮಂಡ್ಯದಲ್ಲಿ ಗಾಂಜಾ ಅಕ್ರಮ ಸಾಗಾಟ ಜಾಲವೊಂದನ್ನು ಭೇದಿಸುವಲ್ಲಿ ಅಬಕಾರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಶ್ರೀರಂಗಪಟ್ಟಣ ಅಬಕಾರಿ ಪೊಲೀಸರು ನಡೆಸಿದ ಭರ್ಜರಿ ಕಾರ್ಯಾಚರಣೆಯಲ್ಲಿ ಬೈಕ್‌ನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿ, 7 ಲಕ್ಷ ಮೌಲ್ಯದ 12 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಇರ್ಷಾದ್ ಮತ್ತು ಅಕ್ಬರ್ ಎಂದು ಗುರುತಿಸಲಾಗಿದೆ. ಇವರು ಮೈಸೂರು ಮತ್ತು ಚಾಮರಾಜನಗರ ಮೂಲದವರಾಗಿದ್ದು, ನಂಬರ್ ಪ್ಲೇಟ್ ಇಲ್ಲದ ಬೈಕ್‌ನಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಬೊಮ್ಮೂರು ಅಗ್ರಹಾರದ ಬಳಿ ಅಬಕಾರಿ ಡಿಸಿ ನಾಗಶಯನ ನೇತೃತ್ವದಲ್ಲಿ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ.
ಈ ಆರೋಪಿಗಳು ಒಡಿಶಾದಿಂದ ಗಾಂಜಾವನ್ನು ತರಿಸಿ ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಿಗೆ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಹಿಂದೆ ಕೂಡ ಇದೇ ದಂಧೆಯಲ್ಲಿ ಭಾಗಿಯಾಗಿದ್ದ ಇವರ ವಿರುದ್ಧ ಮಾದಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ : ಖ್ಯಾತ ಗಾಯಕಿ ಮಂಗ್ಲಿ ಬರ್ತ್ಡೇ ಪಾರ್ಟಿ ಮೇಲೆ ಪೊಲೀಸ್ ರೇಡ್ – ಡ್ರಗ್ಸ್, ಗಾಂಜಾ, ಮಾದಕ ದ್ರವ್ಯಗಳು ಪತ್ತೆ!
