ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟ ಪ್ರಕರಣ ಸಂಬಂಧ ಆರ್‌ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರನ್ನು ಬಂಧಿಸಿದ್ದಾರೆ. ತಮ್ಮ ಬಂಧನ ಪ್ರಶ್ನಿಸಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠದಲ್ಲಿ ನಿಖಿಲ್ ಸೋಸಲೆ ಅರ್ಜಿ ವಿಚಾರಣೆ ನಡೆದಿದೆ. ನಿಖಿಲ್ ಪರವಾಗಿ ಸಂದೇಶ ಚೌಟ ವಾದ ಮಂಡಿಸಿದ್ದು, ರಾಜ್ಯ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ವಾದ ಮಂಡನೆ ಮಾಡಿದ್ದಾರೆ. ಇಂದು ವಾದ ಪ್ರತಿವಾದ ಮುಕ್ತಾಯವಾಗಿದ್ದು, ನಾಳೆ ಮಧ್ಯಾಹ್ನ 2:30ಕ್ಕೆ ಹೈಕೋರ್ಟ್ ಮಧ್ಯಂತರ ತೀರ್ಪು ಪ್ರಕಟಿಸಲಿದೆ.
ಇದನ್ನೂ ಓದಿ : ಬೈಕ್‌ನಲ್ಲಿ ಗಾಂಜಾ ಸಾಗಾಟ ಮಾಡ್ತಿದ್ದ ಇಬ್ಬರು ಆರೋಪಿಗಳು ಅರೆಸ್ಟ್ – 12 ಕೆ.ಜಿ ಗಾಂಜಾ ವಶಕ್ಕೆ!

Author: Btv Kannada
Post Views: 189