ಬೆಂಗಳೂರು : ರಾಜ್ಯದಲ್ಲಿ ಕಳೆದ ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಇನ್ನು ಮುಂದಿನ ಐದು ದಿನಗಳವರೆಗೆ ರಾಜ್ಯಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ನಾಳೆಯಿಂದ ಜೂನ್ 16ರವರೆಗೆ ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ ಎಂದು ತಿಳಿಸಿದ್ದು, ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಯೆಲ್ಲೋ ಅಲರ್ಟ್ ಹಾಗೂ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಸಿಡಿಲಿನಿಂದ ಕೂಡಿದ್ದು ವ್ಯಾಪಕವಾಗಿ ಸಾಧಾರಣ ಮಳೆ ಸಹಿತ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (KSNDMC) ತಿಳಿಸಿದೆ.
ಜೂನ್ 12ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ : “ದೂರ ತೀರ ಯಾನ” ಸಿನಿಮಾದ ಟೈಟಲ್ ಸಾಂಗ್ ರಿಲೀಸ್ – ಜು.11ಕ್ಕೆ ಚಿತ್ರ ತೆರೆಗೆ!
