ಉಡುಪಿ : ಇಂದು ಜಿಲ್ಲೆಯಾದ್ಯಂತ ವ್ಯಾಪಕ ಮಳೆ ಆಗುವ ಸಾಧ್ಯತೆ ದಟ್ಟವಾಗಿರುವ ಹಿನ್ನೆಲೆಯಲ್ಲಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂಗಾರು ಮಳೆ ಆರಂಭವಾಗಿದ್ದು, ಉಡುಪಿ ಜಿಲ್ಲೆಗೆ ಇಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಅವರು ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಆದ್ದರಿಂದ ಕೊಡಗಿನ ಅಂಗನವಾಡಿಗಳಿಗೂ ಇಂದು ರಜೆ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ಕೊಡುಗಿಗೂ ರೆಡ್ ಅಲರ್ಟ್ ನೀಡಿದೆ. ಇದರಿಂದಾಗಿಯೇ ಜಿಲ್ಲೆಯ ಅಂಗನವಾಡಿ, ಶಾಲೆಗಳಿಗೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ – ಮಾಜಿ ಶಾಸಕ ಮೊಯಿದ್ದೀನ್ ಬಾವಾ ವಿರುದ್ಧ FIR!
