ಪ್ರಯಾಗ್‌ರಾಜ್ : ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ, ದೇಶದ ಶ್ರೀಮಂತ ಉದ್ಯಮಿ ಮುಖೇಶ್ ಅಂಬಾನಿ ತಮ್ಮ ಕುಟುಂಬ ಸಮೇತ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರೋ ಮಹಾ ಕುಂಭಮೇಳದಲ್ಲಿ ಭಾಗವಹಿಸಿದ್ದಾರೆ.

ನಿನ್ನೆ ಪ್ರಯಾಗ್‌ರಾಜ್ ಭೇಟಿ ನೀಡಿದ ಮುಖೇಶ್ ಅಂಬಾನಿ ಜೊತೆ ಅವರ ತಾಯಿ ಕೋಕಿಲಾಬೆನ್ ಅಂಬಾನಿ ಕೂಡ ಬಂದಿದ್ದರು.

ಇನ್ನು ಮುಖೇಶ್ ಅಂಬಾನಿ ಪುತ್ರರಾದ ಅನಂತ್ ಮತ್ತು ಆಕಾಶ್ ಅಂಬಾನಿ, ಆಕಾಶ್ ಅವರ ಪತ್ನಿ ಶ್ಲೋಕಾ ಮೆಹ್ತಾ ಮತ್ತು ಅವರ ಇಬ್ಬರು ಮಕ್ಕಳಾದ ಪೃಥ್ವಿ ಮತ್ತು ವೇದಾ, ಅನಂತ್ ಅಂಬಾನಿ ಪತ್ನಿ ರಾಧಿಕಾ ಎಲ್ಲರೂ ಒಟ್ಟಾಗಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.

ಸಂಗಮದಲ್ಲಿ ಸ್ನಾನ ಮಾಡಿದ ಬಳಿಕ, ಅಂಬಾನಿ ಕುಟುಂಬಸ್ಥರು ನಿರಂಜನಿ ಅಖಾಡದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಸ್ವಾಮಿ ಕೈಲಾಶಾನಂದ ಗಿರಿ ಜಿ ಮಹಾರಾಜ್ ಅವರ ಸಮ್ಮುಖದಲ್ಲಿ ಗಂಗಾ ಮಾತೆಗೆ ಪ್ರಾರ್ಥನೆ ಸಲ್ಲಿಸಿದೆ.

ಇನ್ನು ಕುಂಭಮೇಳ ಭೇಟಿ ವೇಳೆ ಅಂಬಾನಿ ಅವರ ಕುಟುಂಬ ಪರಮತೀರ್ಥ ತ್ರಿವೇಣಿ ಪುಷ್ಪ ಆಶ್ರಮದಲ್ಲಿ ನಡೆದ ಯಜ್ಞದಲ್ಲಿಯೂ ಭಾಗವಹಿಸಿದೆ.








