ಬೆಂಗಳೂರು : ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಖಡಕ್ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರಿಗೆ ರಾಜ್ಯ ಸರ್ಕಾರ ಮಹತ್ವದ ಹುದ್ದೆಯನ್ನು ನೀಡಿದೆ.
ಎರಡು ವಾರದ ಹಿಂದಷ್ಟೇ ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರಿಗೆ ಎಡಿಜಿಪಿ ಹುದ್ದೆಗೆ ಮುಂಬಡ್ತಿ ನೀಡಿದ್ದ ಕರ್ನಾಟಕ ಸರ್ಕಾರ ಇದೀಗ ಅವರನ್ನು ಬೆಂಗಳೂರು ಮೆಟ್ರೋಪಾಲಿಟನ್ ಟಾಸ್ಕ್ ಫೊರ್ಸ್ ಎಡಿಜಿಪಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ, ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಕರ್ನಾಟಕ ರೇಷ್ಮೆ ಮಾರುಕಟ್ಟೆ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಿ. ರೂಪಾ ಮೌದ್ಗಿಲ್ ಅವರಿಗೆ ಕರ್ನಾಟಕ ಹೈಕೋರ್ಟ್ ನಿರ್ದೇಶದ ಅನುಸಾರ ಎರಡು ವಾರಗಳ ಹಿಂದೆ ಮುಂಬಡ್ತಿ ನೀಡಿ ಆದೇಶ ಹೊರಡಿಸಲಾಗಿತ್ತು. ನ್ಯಾಯವಾಗಿ ತಮಗೆ ಸಿಗಬೇಕಾದ ಬಡ್ತಿ ನೀಡುವ ಕುರಿತು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕೆಂದು ಕೋರಿ ರೂಪಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
ಇದನ್ನೂ ಓದಿ : ಬಿಟಿವಿಯ ಬಿಗ್ ಇಂಪ್ಯಾಕ್ಟ್ – ಪೊಲೀಸ್ ಠಾಣೆಯಲ್ಲೇ ಗಾಂಜಾ ಡೀಲಿಂಗ್ ಮಾಡ್ತಿದ್ದ ಹೆಡ್ ಕಾನ್ಸ್ಟೇಬಲ್ ನಾಗರಾಜ ಸಸ್ಪೆಂಡ್!
