ಅಹಮದಾಬಾದ್ : 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಗುಜರಾತ್‌ನ ಅಹಮದಾಬಾದ್‌ನಲ್ಲಿ ಪತನಗೊಂಡಿದ್ದು, ವಿಮಾನದಲ್ಲಿದ್ದ 150ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.
230 ಪ್ರಯಾಣಿಕರು ಮತ್ತು 12 ಸಿಬ್ಬಂದಿಯೊಂದಿಗೆ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ AI-171 ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಮೇಘನಿನಗರ ಬಳಿ ಪತನಗೊಂಡಿದ್ದು, ಆ ಪ್ರದೇಶದಲ್ಲಿ ಭೀತಿಯನ್ನು ಉಂಟುಮಾಡಿದೆ. ವಿಮಾನ ಪತನವಾಗುವಾಗ ಮರವೊಂದಕ್ಕೆ ಹಾಗೂ ಅದರ ಪಕ್ಕದಲ್ಲಿದ್ದ ಕಟ್ಟಡವೊಂದಕ್ಕೆ ಅಪ್ಪಳಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಮೂಲಗಳ ಪ್ರಕಾರ, ಗುರುವಾರ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಇದ್ದರು ಎಂದು ಮೂಲಗಳು ತಿಳಿಸಿವೆ.

Author: Btv Kannada
Post Views: 306