ಕಾಲ್ತುಳಿತ ಪ್ರಕರಣ – ಬಂಧಿತ ನಾಲ್ವರಿಗೆ ಮಧ್ಯಂತರ ಜಾಮೀನು ಮಂಜೂರು!

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ನಡೆದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಅಭಿಮಾನಿಗಳು ಮೃತಪಟ್ಟ ಪ್ರಕರಣ ಸಂಬಂಧ ಆರ್​ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ ಸೇರಿ ನಾಲ್ವರನ್ನು ಬಂಧಿಸಿದ್ದರು. ತಮ್ಮ ಬಂಧನ ಪ್ರಶ್ನಿಸಿ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆ ಮತ್ತಿತರರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು.

ನಿನ್ನೆ ಹೈಕೋರ್ಟ್​ ನ್ಯಾಯಮೂರ್ತಿ ಕೃಷ್ಣಕುಮಾರ್ ಪೀಠ ಅರ್ಜಿ ವಿಚಾರಣೆ ನಡೆಸಿ, ಮಧ್ಯಂತರ ತೀರ್ಪನ್ನು ಇಂದಿಗೆ ಕಾಯ್ದಿರಿಸಿದ್ದರು. ಇದೀಗ ಹೈಕೋರ್ಟ್​ ಬಂಧಿತ ನಾಲ್ವರಿಗೂ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.

ಆರ್​ಸಿಬಿ ಮಾರ್ಕೆಂಟಿಂಗ್ ಮುಖ್ಯಸ್ಥ ನಿಖಿಲ್ ಸೋಸಲೆ, ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್ ಮತ್ತು ಶಮಂತ್ ಮಾವಿನಕೆರೆಗೆ ಜಾಮೀನು ನೀಡಿ, ನಾಲ್ವರ ಪಾಸ್ ಪೋರ್ಟ್ ಸರೆಂಡರ್ ಮಾಡಲು ನ್ಯಾ. ಕೃಷ್ಣಕುಮಾರ್ ವಿಭಾಗೀಯ ಪೀಠ ಆದೇಶ ನೀಡಿದೆ.

ಇದನ್ನೂ ಓದಿ : ಬಿಡುಗಡೆಗೆ ಸಜ್ಜಾದ ಸುಚೇಂದ್ರ ಪ್ರಸಾದ್ ನಿರ್ದೇಶನದ ‘ಪದ್ಮಗಂಧಿ’ ಚಿತ್ರ!

Btv Kannada
Author: Btv Kannada

Read More