ಬೆಂಗಳೂರು : ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಪತನ ದುರದುಷ್ಟಕರ ಘಟನೆಯಾಗಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಗುಜರಾತ್‌ನ ಅಹಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ ಆಗಿದೆ. ಈ ಘಟನೆ ನಡೆದಿರುವುದು ನನಗೆ ಆಶ್ಚರ್ಯ ತರಿಸಿದೆ. ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ವಿಮಾನಗಳು ಉತ್ತಮವಾಗಿ ಸಂಚಾರ ಆಗ್ತಿತ್ತು. ನಾನು ಕೆಲ ದೃಶ್ಯಗಳನ್ನ ನೋಡಿದ್ದೇನೆ. ಬೆಂಕಿ ಹತ್ತಿಕೊಂಡು ಉರಿಯುತ್ತಿತ್ತು ಎಂದಿದ್ದಾರೆ.
ನಾನು ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಈ ದೇಶದಲ್ಲಿ ಹೆಚ್ಚು ಸಾವು ಆಗಬಾರದು. ದುರಂತದಲ್ಲಿ ಸಾವನ್ನಪ್ಪಿದವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಸ್ತನ ಕ್ಯಾನ್ಸರ್ ಜಾಗೃತಿ ಅಭಿಯಾನಕ್ಕೆ ಉಪಾಸನಾ ಕಾಮಿನೇನಿ ಕೊನಿಡೇಲಾ ರಾಯಭಾರಿ!

Author: Btv Kannada
Post Views: 292