ಗುಜರಾತ್ : ಅಹಮದಾಬಾದ್‌ನಲ್ಲಿ ಇಂದು ಮಧ್ಯಾಹ್ನ ಭೀಕರ ವಿಮಾನ ದುರಂತ ಸಂಭವಿಸಿದೆ. ಲಂಡನ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ (AI171), ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ, ಅಂದರೆ ಐದು ನಿಮಿಷಗಳೊಳಗೆ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೇಲ್ ಮೇಲೆ ಪತನಗೊಂಡಿದೆ.
ವಿಮಾನ ನಿಲ್ದಾಣದಿಂದ ಕೇವಲ 2 ಕಿ.ಮೀ ದೂರದ ಮೇಘಾನಿ ಪ್ರದೇಶದಲ್ಲಿ ವಿಮಾನ ಪತನಗೊಂಡಿದ್ದು, ಆಕಾಶದಲ್ಲಿ ದಟ್ಟ ಹೊಗೆ ಆವರಿಸಿದೆ. ಈ ದುರಂತದಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ಸೇರಿ 242 ಮಂದಿಯೂ ಸಾವನ್ನಪ್ಪಿದ್ದಾರೆ. ವಿಮಾನದಲ್ಲಿದ್ದ ಒಬ್ಬರೂ ಕೂಡಾ ಬದುಕುಳಿಯಲಿಲ್ಲ ಎಂಬುದು ತಿಳಿದುಬಂದಿದೆ.
242 ಪ್ರಯಾಣಿಕರಲ್ಲಿ 169 ಜನ ಭಾರತೀಯರು, 53 ಬ್ರಿಟಿಷರು, 12 ಸಿಬ್ಬಂದಿ ದುರ್ಮರಣ ಹೊಂದಿದ್ದಾರೆ. ಅಲ್ಲದೇ ಬಿಜೆ ಮೆಡಿಕಲ್ ಕಾಲೇಜು ಹಾಸ್ಟೆಲ್‌ಗೆ ವಿಮಾನ ಬಡಿದ್ದಿದ್ದು, ಭಾರೀ ಸಾವು-ನೋವಿನ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಮೇಲೆ ವಿಮಾನ ಪತನ – 7 ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ!
