ಡಾರ್ಲಿಂಗ್ ಕೃಷ್ಣ ಬರ್ತ್​ಡೇಗೆ “ಬ್ರ್ಯಾಟ್” ಟೀಸರ್ ರಿಲೀಸ್ ಮಾಡಿ ಶುಭಾಶಯ ಹೇಳಿದ ಚಿತ್ರತಂಡ!

“ಫಸ್ಟ್ ರ‍್ಯಾಂಕ್ ರಾಜು” ಖ್ಯಾತಿಯ ನಿರ್ಮಾಪಕ‌ ಮಂಜುನಾಥ್ ಕಂದಕೂರ್ ಅವರು ಐದು ವರ್ಷಗಳ ನಂತರ ನಿರ್ಮಿಸುತ್ತಿರುವ ಹಾಗೂ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಶಶಾಂಕ್ ನಿರ್ದೇಶನದ ಹಾಗೂ ತಮ್ಮ ನಟನೆಯ ಮೂಲಕ ಜನಪ್ರಿಯರಾಗಿರುವ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸುತ್ತಿರುವ “ಬ್ಯಾಟ್” ಚಿತ್ರತಂಡ ಟೀಸರ್ ಬಿಡುಗಡೆ ಮಾಡಿದೆ.

ಡಾರ್ಲಿಂಗ್ ಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಈ ಟೀಸರ್ ಬಿಡುಗಡೆ ಮಾಡಿರುವ ಚಿತ್ರತಂಡ ಆ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದೆ. ಈಗಾಗಲೇ ಶೀರ್ಷಿಕೆ, ಫಸ್ಟ್ ಲುಕ್ ಮೂಲಕ ಎಲ್ಲರ ಗಮನ ಸೆಳೆದಿರುವ “ಬ್ರ್ಯಾಟ್” ಚಿತ್ರದ ಟೀಸರ್​ಗೆ ಮೆಚ್ಚುಗೆ ವ್ಯಕ್ತವಾಗುತ್ತಿದೆ‌. ಡಾರ್ಲಿಂಗ್ ಕೃಷ್ಣ-ಮಿಲನ ನಾಗರಾಜ್ ಪುತ್ರಿ ಸಹ ಈ ಟೀಸರ್ ವೀಕ್ಷಿಸುತ್ತಿರುವುದು ಸಾಕಷ್ಟು ವೈರಲ್ ಆಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.

ಈ ಚಿತ್ರವು ತಂದೆ-ಮಗನ ಸಂಘರ್ಷದ ಸುತ್ತ ಸುತ್ತುತ್ತದೆ. ಹಿರಿಯ ನಟ ಅಚ್ಯುತ್ ಕುಮಾರ್ ತಂದೆಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ಮನಿಶಾ ಕಂದಕೂರ್ ಅಭಿನಯಿಸುತ್ತಿದ್ದಾರೆ. ರಮೇಶ್ ಇಂದಿರಾ, ಡ್ರ್ಯಾಗನ್ ಮಂಜು ಮುಂತಾದವರ ತಾರಾಬಳಗವಿರುವ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಅಭಿಲಾಶ್ ಕಲ್ಲತ್ತಿ ಛಾಯಾಗ್ರಹಣವಿದೆ‌.

ಇದನ್ನೂ ಓದಿ : ವಿಮಾನ ದುರಂತದಲ್ಲಿ ಗುಜರಾತ್​ನ ಮಾಜಿ ಸಿಎಂ ವಿಜಯ್ ರೂಪಾನಿ ನಿಧನ.. ಕೊನೆ ಕ್ಷಣದ ಫೋಟೋ ಇಲ್ಲಿದೆ!

Btv Kannada
Author: Btv Kannada

Read More